Log In
BREAKING NEWS >
ಮುಂಬಯಿಗೆ ಮತ್ತೆ ಮಳೆ ಭೀತಿ : ಮುಂದಿನ ವಾರ ಧಾರಾಕಾರ ಮಳೆ ಸಾಧ್ಯತೆ......ಭಾರಿ ಮಳೆ-ಪ್ರವಾಹ: ಕರ್ನಾಟಕದ ಕನಿಷ್ಟ 100 ರಸ್ತೆಗಳು, ಸೇತುವೆಗಳಿಗೆ ಹಾನಿ!....

ಕೇರಳ: ಪದ್ಮನಾಭ ಸ್ವಾಮಿ ದೇವಾಲಯ ಆಡಳಿತ ತಿರುವಾಂಕೂರು ರಾಜಮನೆತನಕ್ಕೆ ಸೇರಿದ್ದು:ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಕೇರಳ ರಾಜ್ಯದ ತಿರುವನಂತಪುರದಲ್ಲಿರುವ ಪ್ರಖ್ಯಾತ ಪದ್ಮನಾಭ ಸ್ವಾಮಿ ದೇವಸ್ಥಾನದ ಆಡಳಿತದ ಹಕ್ಕು ತಿರುವಾಂಕೂರು ರಾಜಮನೆತನಕ್ಕೆ ಸೇರಿದ್ದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ.

ನ್ಯಾಯಮೂರ್ತಿಗಳಾದ ಇಂದು ಮಲ್ಹೋತ್ರಾ ಮತ್ತು ಯುಯು ಲಲಿತ್ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ತೀರ್ಪನ್ನು ಪ್ರಕಟಿಸಿದ್ದು ಜಿಲ್ಲಾ ನ್ಯಾಯಾಧೀಶರ ನೇತೃತ್ವದ ಆಡಳಿತಾತ್ಮಕ ಸಮಿತಿ ದೇವಸ್ಥಾನದ ಆಡಳಿತ ನಿರ್ವಹಣೆಯನ್ನು ನೋಡಿಕೊಳ್ಳುತ್ತದೆ ಎಂದು ಹೇಳಿದೆ.

ಕೇರಳ ಹೈಕೋರ್ಟ್ 2011ರ ಜನವರಿ 31ರಂದು ನೀಡಿದ್ದ ತೀರ್ಪನ್ನು ಪ್ರಶ್ನಿಸಿ ತಿರುವಾಂಕೂರು ರಾಜ ಮನೆತನದ ಕಾನೂನು ಪ್ರತಿನಿಧಿಗಳು ಸೇರಿದಂತೆ ಹಲವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ.

No Comments

Leave A Comment