Log In
BREAKING NEWS >
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ; ಮುಖ್ಯ ಆರೋಪಿ ನವೀನ್ ಸೇರಿದಂತೆ 110 ಮಂದಿ ಬಂಧನ...

ಅಕ್ರಮ ದನ ಸಾಗಾಟ ತಡೆಯಲೆತ್ನಿಸಿದ ಭಜರಂಗದಳ ಕಾರ್ಯಕರ್ತರಿಬ್ಬರ ಮೇಲೆ‌ ದಾಳಿ

ಬೆಳ್ತಂಗಡಿ: ಆಟಿ ಅಮವಾಸ್ಯೆ ದಿನ ಮುಂಜಾನೆ 3 ಗಂಟೆ ಸುಮಾರಿಗೆ ಬೆಳ್ತಂಗಡಿ ತಾಲೂಕಿನ ಸುರ್ಯ ಪಡ್ಪು ನಿವಾಸಿಯೋರ್ವನ ಮನೆಯಿಂದ ಪಿಕಪ್ ವಾಹನದಲ್ಲಿ ಮೂರು ದನ, ಎರಡು ಕರು ಅಮಾನುಷವಾಗಿ ಸಾಗಿಸುತ್ತಿದ್ದಾಗ ಭಜರಂಗದಳ ಕಾರ್ಯಕರ್ತರು ಹಿಡಿದು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿ ರಾಜೇಶ್ ಮತ್ತು ಆತನ ಸಹಚರರು ಅವರ ಬೆಂಗಾವಲು ಕಾರಿನಲ್ಲಿ ಪರಾರಿಯಾಗಿದ್ದಾರೆ.

ಈ ವೇಳೆ ಅವರದ್ದೇ ಮತ್ತೊಂದು ತಂಡ ಕಸಾಯಿಖಾನೆಗೆ ದನವನ್ನು ಪಿಕಪ್ ವಾಹನ ಮತ್ತು ಬೆಂಗಾವಲು ಕಾರಲ್ಲಿ ಹೋಗುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು ಅವರನ್ನು ಹಿಡಿಯಲು ಗುರುವಾಯನಕೆರೆ ಬಳಿ ಹೋದಾಗ ಇಬ್ಬರು ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಹಲ್ಲೆಗೊಳಗಾದ ಭಜರಂಗದಳ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದಾರೆ‌. ಪಿಕಪ್‌ ವಾಹನದಲ್ಲಿ ಚಿಕನ್ ಸೆಂಟರ್ ಹೆಸರಲ್ಲಿ ಪಡೆದ ಕೋವಿಡ್-19 ಪಾಸ್ ಪತ್ತೆಯಾಗಿದೆ.

No Comments

Leave A Comment