Log In
BREAKING NEWS >
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ; ಮುಖ್ಯ ಆರೋಪಿ ನವೀನ್ ಸೇರಿದಂತೆ 110 ಮಂದಿ ಬಂಧನ...

ದ.ಕನ್ನಡ ಜಿಲ್ಲಾಡಳಿತದ ತಪ್ಪು ನೀತಿಯೇ 60ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣ: ಕಾಂಗ್ರೆಸ್

ಮಂಗಳೂರು: ಜಿಲ್ಲಾಡಳಿತದ ತಪ್ಪು ನೀತಿಯೇ 60ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾಗಿದೆ. ಕೋವಿಡ್ 19 ನಿರ್ವಹಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ವಿಫಲವಾಗಿದೆ ಎಂದು ದಕ್ಷಿಣ ಕನ್ನಡ ಕಾಂಗ್ರೆಸ್ ನಾಯಕರು ಆರೋಪಿಸಿದರು.

ಕೋವಿಡ್ ಚಿಕಿತ್ಸೆಗೆ ನಿರಾಕರಿಸಿದ ಖಾಸಗಿ ಆಸ್ಪತ್ರೆಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್ ನಿಯೋಗ ಮಂಗಳೂರಲ್ಲಿ ಇಂದು ಪ್ರತಿಭಟನೆ ನಡೆಸಿತು.

ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆ ಎದುರು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ರಮಾನಾಥ ರೈ, ಶಾಸಕ ಯುಟಿ ಖಾದರ್, ಹರೀಶ್ ಕುಮಾರ್, ಮಾಜಿ ಶಾಸಕರಾದ ಜೆ ಅರ್ ಲೋಬೊ, ಮೊಯ್ದಿನ್ ಬಾವ,  ಸೇರಿದಂತೆ ಹಲವು ನಾಯಕರು ಭಾಗಿಯಾಗಿದರು.

No Comments

Leave A Comment