Log In
BREAKING NEWS >
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ; ಮುಖ್ಯ ಆರೋಪಿ ನವೀನ್ ಸೇರಿದಂತೆ 110 ಮಂದಿ ಬಂಧನ...

ತಮಿಳುನಾಡು:ರಾಷ್ಟ್ರೀಯ ಬ್ಯಾಂಕ್ ವೊಂದರ ಮುಖ್ಯ ಶಾಖೆಯ 38 ಉದ್ಯೋಗಿಗಳಿಗೆ ಕೊರೋನಾ!

ತಿರುಚಿರಪಳ್ಳಿ: ತಮಿಳುನಾಡಿನ ತಿರುಚಿರಪಳ್ಳಿಯ ರಾಷ್ಟ್ರೀಯ ಬ್ಯಾಂಕ್ ವೊಂದರ ಮುಖ್ಯ ಶಾಖೆಯ 38 ನೌಕರರಿಗೆ ಕೊರೋನಾ
ತಗುಲಿದೆ. ಬ್ಯಾಂಕ್ ಹಾಗೂ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಈ ವಿಷಯವನ್ನು ತಿಳಿಸಿದ್ದಾರೆ.

ಬ್ಯಾಂಕಿಗೆ ಬಂದಿರುವ ಗ್ರಾಹಕರು ಸ್ವಯಂ ಪ್ರೇರಿತರಾಗಿ ಕೊರೋನಾವೈರಸ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಈ ಹಿಂದೆ ಶಾಖೆಯ ಹಿರಿಯ ಅಧಿಕಾರಿಯೊಬ್ಬರು ಕೋವಿಡ್-19 ಕಾರಣದಿಂದ ಮೃತಪಟ್ಟಿದ್ದರು.ಇತ್ತೀಚಿಗೆ ಬ್ಯಾಂಕ್ ನಲ್ಲಿ
ಸಾಮೂಹಿಕ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ನಂತರ ತಡವಾಗಿ ಪಾಸಿಟಿವ್ ಪ್ರಕರಣ ಕಂಡುಬಂದಿದೆ
ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬ್ಯಾಂಕಿಗೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಲಾಗಿದ್ದು, ನಾಳೆಯಿಂದ ಕಾರ್ಯಾರಂಭ ಮಾಡುವ ಸಾಧ್ಯತೆಯಿದೆ
ಕಾರ್ಪೋರೇಷನ್ ಆರೋಗ್ಯ ಅಧಿಕಾರಿಗಳು ಬ್ಯಾಂಕಿಗೆ ಆಗಮಿಸಿದ ಗ್ರಾಹಕರೊಂದಿಗೆ ಸಂಪರ್ಕದಲ್ಲಿರುವುದಾಗಿ ಹಿರಿಯ ಬ್ಯಾಂಕ್
ಅಧಿಕಾರಿಗಳು ಹೇಳಿದ್ದಾರೆ.

ಮಹಾರಾಷ್ಟ್ರ ನಂತರ ತಮಿಳುನಾಡಿನಲ್ಲಿ ಅತಿ ಹೆಚ್ಚಿನ ಸಂಖ್ಯೆಯ ಕೊರೋನಾವೈರಸ್ ಪ್ರಕರಣ ವರದಿಯಾಗಿದೆ. ಶನಿವಾರ ಒಟ್ಟಾರೇ, 2,06, 737 ಪಾಸಿಟಿವ್ ಪ್ರಕರಣ ವರದಿಯಾಗಿದೆ.

No Comments

Leave A Comment