Log In
BREAKING NEWS >
ಶ್ರೀಕೃಷ್ಣಮಠದ ಮುಖ್ಯದ್ವಾರದಲ್ಲಿ ಕನ್ನಡ ನಾಮಫಲಕ ಅಳವಡಿಕೆ-ಗದ್ದಲವೆಬ್ಬಿಸಿದ ಪೆರ೦ಪಳ್ಳಿಗೆ ತೀವ್ರ ಮುಖಭ೦ಗ........ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಸುಶಾಂತ್ ಸಿಂಗ್ ತಂದೆಯಿಂದ ರಿಯಾ ಚಕ್ರವರ್ತಿ ವಿರುದ್ಧ ಎಫ್ ಐಆರ್ ದಾಖಲು

ಮುಂಬೈ: ಇತ್ತೀಚಿಗೆ ಆತ್ಮಹತ್ಯೆಗೆ ಶರಣಾದ ಬಾಲಿವುಡ್ ನಟ ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ವಿರುದ್ಧ ಸುಶಾಂತ್ ಸಿಂಗ್ ತಂದೆ ಕೆ ಕೆ ಸಿಂಗ್ ಪಾಟ್ನಾದ ಪೊಲೀಸ್ ಠಾಣೆಯೊಂದರಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ.

ಆತ್ಮಹತ್ಯೆಗೆ ಪ್ರಚೋದನೆ ಸೇರಿದಂತೆ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪಾಟ್ನಾ ಸೆಂಟ್ರಲ್ ವಲಯದ ಇನ್ಸ್ ಪೆಕ್ಟರ್ ಜನರಲ್ ಸಂಜಯ್ ಸಿಂಗ್ ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ನಾಲ್ವರು ಪೊಲೀಸರನ್ನೊಳಗೊಂಡ ತಂಡವನ್ನು ಮುಂಬೈಗೆ ಕಳುಹಿಸಲಾಗುವುದು, ಈ ತಂಡ ಮುಂಬೈ ಪೊಲೀಸರಿಂದ ಕೇಸ್ ಡೈರಿ ಮತ್ತಿತರ ಪ್ರಮುಖ ದಾಖಲೆಗಳನ್ನು ಸಂಗ್ರಹಿಸಲಿದೆ ಎಂದು ಸಿಂಗ್ ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ಸಿಬಿಐ ತನಿಖೆ ನಡೆಯಬೇಕೆಂದು ಒತ್ತಾಯಿಸಿದ ಪೋಸ್ಟ್ ವೊಂದನ್ನು ಗೃಹ ಸಚಿವ ಅಮಿತ್ ಶಾ ಅವರಿಗೆ ರಿಯಾ ಚಕ್ರವರ್ತಿ ಟ್ಯಾಗ್ ಮಾಡಿದ್ದರು.

ಮುಂಬೈನ ಬಾಂದ್ರಾದಲ್ಲಿ ಜೂನ್ 14 ರಂದು ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದರು. ಈ ಸಂಬಂಧ ಇಲ್ಲಿಯವರೆಗೂ
ರಿಯಾ ಚಕ್ರವರ್ತಿ ಸೇರಿದಂತೆ ಸುಮಾರು 40 ಜನರ ಹೇಳಿಕೆಗಳನ್ನು ಪೊಲೀಸರು ದಾಖಲಿಸಿದ್ದಾರೆ.

No Comments

Leave A Comment