Log In
BREAKING NEWS >
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ; ಮುಖ್ಯ ಆರೋಪಿ ನವೀನ್ ಸೇರಿದಂತೆ 110 ಮಂದಿ ಬಂಧನ...

ಕ್ಯಾಟರಿಂಗ್ ಉದ್ಯಮಿ ಎಚ್. ಪುಂಡಲೀಕ ಭಟ್

ಉಡುಪಿ: ಕ್ಯಾಟರಿಂಗ್ ಉದ್ಯಮಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಗುಂಡಿಬೈಲು ನಿವಾಸಿ ಎಚ್. ಪುಂಡಲೀಕ ಭಟ್(76) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ.

ಇವರು ಕಳೆದ 5 ದಶಕಗಳಿಂದ “ಭಟ್ಜೀಸ್” ಎಂಬ ಕ್ಯಾಟರಿಂಗ್ ಸಂಸ್ಥೆಯನ್ನು ಪ್ರಾರಂಭಿಸಿದ್ದರು. ಕೊಡುಗೈ ದಾನಿಯಾಗಿದ್ದ ಇವರು ಹಲವಾರು ಬಡವರಿಗೆ ಉಚಿತವಾಗಿ ಅನ್ನದಾನದ ವ್ಯವಸ್ಥೆ ಮಾಡುತ್ತಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಉಡುಪಿ ಕ್ಷೇತ್ರದ ಶಾಸಕ ಕೆ. ರಘುಪತಿ ಭಟ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ. ರಾಘವೇಂದ್ರ ಕಿಣಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

No Comments

Leave A Comment