Log In
BREAKING NEWS >
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ; ಮುಖ್ಯ ಆರೋಪಿ ನವೀನ್ ಸೇರಿದಂತೆ 110 ಮಂದಿ ಬಂಧನ...

ಡಿವೈಡರ್ ಗೆ ಢಿಕ್ಕಿಯಾಗಿ ಪಲ್ಟಿಯಾದ ಕಾರು: ಮಗು ಸಾವು, ಇಬ್ಬರಿಗೆ ಗಂಭೀರ ಗಾಯ

ಉಡುಪಿ: ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಎರಡು ವರ್ಷದ ಮಗು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ.

ಕಾರಿನಲ್ಲಿದ್ದ ಉಳಿದ ನಾಲ್ಕು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ವರದಿಯಾಗಿದೆ.

ಪತಿ, ಪತ್ನಿ ಮತ್ತು ನಾಲ್ವರು ಮಕ್ಕಳು ಕಾರಿನಲ್ಲಿ ಮಂಗಳೂರಿನಿಂದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಅಂಬಲಪಾಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆಯ ಡಿವೈಡರ್ ಗೆ ಢಿಕ್ಕಿ ಹೊಡೆದು ಬಳಿಕ ಪಲ್ಟಿಯಾಗಿದೆ.

ಘಟನೆಯಲ್ಲಿ ಮಹಿಳೆಗೆ ಗಂಭೀರ ಗಾಯವಾಗಿದ್ದು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಐವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಗಾಯಾಳುಗಳ ವಿವರ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಸ್ಥಳಕ್ಕೆ ಉಡುಪಿ ನಗರ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment