Log In
BREAKING NEWS >
ಪ೦ಚ ಸ್ವಾಮೀಜಿಯವರ ದಿವ್ಯ ಹಸ್ತದಿ೦ದ ದೀಪ ಪ್ರಜ್ವಲನೆಯೊ೦ದಿಗೆ ಮುಷ್ಠಿ ಎಳ್ಳು ಸಮರ್ಪಣೆಯೊ೦ದಿಗೆ ಶ್ರೀಕೃಷ್ಣನದರ್ಶನಕ್ಕೆ ಚಾಲನೆ...ಡ್ರಗ್ಸ್ ದ೦ಧೆ ಪ್ರಕರಣ:ಇಬ್ಬರು ನಟಿಮಣಿಯರಿಗಿಲ್ಲ ಜಾಮೀನು ಭಾಗ್ಯ-ಸೆ.30ಕ್ಕೆ ಮತ್ತೆ ವಿಚಾರಣೆ

ಮುಂಬಯಿ: ಮತ್ತೊಬ್ಬ ಕಿರುತೆರೆ ನಟ ಸಮೀರ್ ಶರ್ಮ ಶವವಾಗಿ ಪತ್ತೆ!

ಮುಂಬೈ: ನಟ ಸುಶಾಂತ್ ಸಿಂಗ್ ಸಾವಿನ ನೋವು ಮಾಸುವ ಮುನ್ನವೇ ಕಿರುತೆರೆ ಕ್ಷೇತ್ರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ, ನಟ ಸಮೀರ್ ಶರ್ಮಾ ಮುಂಬೈ ಉಪನಗರ ನಿವಾಸದಲ್ಲಿ ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ.

ಸಮೀರ್ ಶರ್ಮ ಅವರಿಗೆ 44 ವರ್ಷ ವಯಸ್ಸಾಗಿತ್ತು. ಧಾರಾವಾಹಿಗಳಲ್ಲಿ ವಿವಿಧ ಪಾತ್ರಗಳ ಮೂಲಕ ಹೆಸರುವಾಸಿಯಾಗಿದ್ದರು. “ಕ್ಯೂಂಕಿ ಸಾಸ್ ಭಿ ಕಭಿ ಬಹು ತಿ, “,”ಕಹಾನಿ ಘರ್ ಘರ್ ಕಿ “ಮತ್ತು” “ಯೆ ರಿಶ್ತೆ ಹೈ ಪ್ಯಾರ್ ಕೆ” ಮೊದಲಾದ ಧಾರಾವಾಹಿಗಳಲ್ಲಿ ಪಾತ್ರಗಳಿಂದ ಅವರು ಜನಪ್ರಿಯತೆ ಗಳಿಸಿದ್ದರು.

ಶರ್ಮಾ ಸೀಲಿಂಗ್ ಫ್ಯಾನ್‌ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆಕಸ್ಮಿಕ ಸಾವಿನ ಪ್ರಕರಣ ದಾಖಲಾಗಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ, ಸ್ಥಳಕ್ಕೆ ಬಂದ ಪೊಲೀಸರಿಗೆ ಯಾವುದೇ ಸೂಸೈಡ್ ನೋಟ್ ಸಿಕ್ಕಿಲ್ಲ ಎಂದು ಮಲಾಡ್ ಪೊಲೀಸರು ತಿಳಿಸಿದ್ದಾರೆ.

No Comments

Leave A Comment