Log In
BREAKING NEWS >
ಪ೦ಚ ಸ್ವಾಮೀಜಿಯವರ ದಿವ್ಯ ಹಸ್ತದಿ೦ದ ದೀಪ ಪ್ರಜ್ವಲನೆಯೊ೦ದಿಗೆ ಮುಷ್ಠಿ ಎಳ್ಳು ಸಮರ್ಪಣೆಯೊ೦ದಿಗೆ ಶ್ರೀಕೃಷ್ಣನದರ್ಶನಕ್ಕೆ ಚಾಲನೆ...ಡ್ರಗ್ಸ್ ದ೦ಧೆ ಪ್ರಕರಣ:ಇಬ್ಬರು ನಟಿಮಣಿಯರಿಗಿಲ್ಲ ಜಾಮೀನು ಭಾಗ್ಯ-ಸೆ.30ಕ್ಕೆ ಮತ್ತೆ ವಿಚಾರಣೆ

ಉಸಿರಾಟ ಸಮಸ್ಯೆ: ಬಾಲಿವುಡ್ ನಟ ಸಂಜಯ್ ದತ್ ಆಸ್ಪತ್ರೆಗೆ ದಾಖಲು

ಬಾಲಿವುಡ್ ನಟ ಸಂಜಯ್ ದತ್ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ  ಪ್ರಸ್ತುತ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಡ್ಡಾಯ ಪ್ರೋಟೋಕಾಲ್ ನಂತೆ ನಟ ಸಂಜಯ್ ದತ್ ಅವರಿಗೆ ಕೋವಿಡ್ -19  ಪರೀಕ್ಷೆ ನಡೆಸಲಾಗಿದ್ದು  ಅವರ ವರದಿಗಳು ನೆಗೆಟಿವ್ ಬಂದಿದೆ,

ನಟ ಸಂಜಯ್ ದತ್ ಅವರ ಕೋವಿಡ್ ವರದಿ ನೆಗೆಟಿವ್ ಬಂದಿದ್ದು ಆದರೆ ವೈದ್ಯಕೀಯ ಪರೀಕ್ಷೆಯ ಕಾರಣ ಇನ್ನೂ ಸ್ವಲ್ಪ ಸಮಯದವರೆಗೆ ಅವರು ಆಸ್ಪತ್ರೆಯಲ್ಲೇ ಇರಲಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯಲ್ಲಿ ನಟನಿಗೆ ಚಿಕಿತ್ಸೆ ನೀಡಿದ್ದ ವೈದ್ಯರು ಹೇಳಿದ್ದಾರೆ.

ಮುನ್ನಾ ಭಾಯ್ ಎಂಬಿಬಿಎಸ್  ಖ್ಯಾತಿಯ ನಟ ಕನ್ನಡದಲ್ಲಿ ಬಹುನಿರೀಕ್ಷಿತ ಚಿತ್ರ “ಕೆಜಿಎಫ್-2” ನಲ್ಲಿ ಅಧೀರನ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಇಂದು ಮುಂಜಾನೆ ಖ್ಯಾತ ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಕೊರೋನಾ ನೆಗೆಟಿವ್ ವರದಿ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

No Comments

Leave A Comment