Log In
BREAKING NEWS >
ಉಡುಪಿ ಶ್ರೀಕೃಷ್ಣಾಪುರ ಮಠಾಧೀಶರ 4ನೇ ಪರ್ಯಾಯಕ್ಕೆ ಅದ್ದೂರಿಯ ಬಾಳೆ ಮುಹೂರ್ತ.........ರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಬೆಂಗಳೂರು: ಮಾದಕವಸ್ತು ಮಾರುತ್ತಿದ್ದ ಮೂವರ ಬಂಧನ, 11 ಕೆ.ಜಿ ಗಾಂಜಾ, 4.40 ಲಕ್ಷ ನಗದು,ವಶ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮತ್ತೆ ಮೂವರನ್ನು ಬಂಧಿಸಲಾಗಿದೆ.

ಬಂಧಿತರನ್ನು ಮಹಮ್ಮದ್ ಅಲಗೀರ್, ಮಹಮ್ಮದ್ ರಿಪೂನ್ ಹಾಗೂ ಮೊಹರ್ ಅಲಿ ಎಂದು ಗುರುತಿಸಲಾಗಿದೆ.ಬಂಧಿತರು  ಪಶ್ಚಿಮ ಬಂಗಾಳ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಬೇಗೂರು ಪೋಲೀಸರು ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ.

ಬಂಧಿತರಿಂದ 4.40 ಲಕ್ಷ ನಗದು, 11 ಕೆಜಿ ಗಾಂಜಾ  ಸೇರಿದಂತೆ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳು ಪಶ್ಚಿಮ ಬಂಗಾಳದಿಂದ ಮಾದಕವಸ್ತುಗಳನ್ನು ಬೆಂಗಳೂರಿಗೆ ತಂದು ಮಾರಾಟ ನಡೆಸಿದ್ದರು. ಇದೀಗ ಬೇಗೂರು ಪೋಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

No Comments

Leave A Comment