Log In
BREAKING NEWS >
ಮಾ.5ರ೦ದು ಬೆಳಿಗ್ಗೆ 8ಗ೦ಟೆಗೆ ಪಣಿಯಾಡಿ ಶ್ರೀಅನ೦ತಪದ್ಮನಾಭ ದೇವಳದ ಗರ್ಭಗುಡಿಯ ಮಹಾದ್ವಾರದ ಹೊಸ್ತಿಲು ಸ್ಥಾಪನೆ ಕಾರ್ಯಕ್ರಮ ಜರಗಲಿದೆ....

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ನವದೆಹಲಿ: ಅಜಾತಶತ್ರು, ದೇಶ ಕಂಡ ಮುತ್ಸದ್ಧಿ ರಾಜಕಾರಣಿ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಮಂಗಳವಾರ ಮಧ್ಯಾಹ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.  ಈ ನಡುವೆ ಪ್ರಣಬ್ ಮುಖರ್ಜಿಯವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪುಷ್ಪನಮನ ಸಲ್ಲಿಸಿದ್ದಾರೆ.

ಪ್ರಣಬ್ ಮುಖರ್ಜಿಯವರ ಪಾರ್ಥೀವ ಶರೀರವನ್ನು ಸೇನಾ ಆಸ್ಪತ್ರೆಯಿಂದ 10 ರಾಜಾಜಿ ಮಾರ್ಗದಲ್ಲಿರುವ ಅವರ ನಿವಾಸದಲ್ಲಿ ಇರಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಪ್ರಣಬ್ ಅವರ ನಿವಾಸಕ್ಕೆ ಭೇಟಿ ನೀಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ, ವಾಯುಸೇನೆ ಮುಖ್ಯಸ್ಥ ಆರ್.ಕೆ.ಎಸ್. ಭಡೌರಿಯಾ, ನೌಕಾಪಡೆ ಮುಖ್ಯಸ್ಥ ಕರಂಬಿರ್ ಸಿಂಗ್ ಅವರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಮಾಜಿ ರಾಷ್ಟ್ರಪತಿ ಪ್ರಣಬ್ ಅವರಿಗೆ ಕೋವಿಡ್ 19 ಪಾಸಿಟಿವ್ ಎಂದು ವರದಿ ಬಂದಿತ್ತು. ಮೆದುಳು ಸರ್ಜರಿ ವೇಳೆ ಈ ವರದಿ ಬಂದ ನಂತರ ಅವರು ಕೋಮಾಕ್ಕೆ ಜಾರಿದ್ದರು. ಕೆಲವು ವಾರಗಳ ನಂತರ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ (ಆಗಸ್ಟ್ 30, 2020) ನಿಧನರಾಗಿದ್ದರು.

No Comments

Leave A Comment