Log In
BREAKING NEWS >
ಉಡುಪಿ ಶ್ರೀಕೃಷ್ಣಾಪುರ ಮಠಾಧೀಶರ 4ನೇ ಪರ್ಯಾಯಕ್ಕೆ ಅದ್ದೂರಿಯ ಬಾಳೆ ಮುಹೂರ್ತ.........ರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಕೇಂದ್ರ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ಅಧಿಕಾರ ಸ್ವೀಕಾರ

ನವದೆಹಲಿ: ಮಾಜಿ ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್ ಅವರು ಕೇಂದ್ರ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಆಗಸ್ಟ್ 31 ರಂದು ಚುನಾವಣಾ ಆಯುಕ್ತ ಅಶೋಕ್ ಲವಾಸಾ ಸೇವೆ ಅಂತ್ಯವಾದ ಹಿನ್ನೆಲೆಯಲ್ಲಿ  ರಾಜೀವ್ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.

ಸಂವಿಧಾನದ 324ನೇ ವಿಧಿಯ ಉಪವಿಧಿ (2) ರ ಅನ್ವಯ ಆಗಸ್ಟ್ 31ಕ್ಕೆ ಕೊನೆಗೊಳ್ಳುವ ಲವಾಸಾ ಅವರ ಸ್ಥಾನಕ್ಕೆ ನಿವೃತ್ತ ಐಎಎಸ್ ಅಧಿಕಾರಿ ರಾಜೀವ್ ಕುಮಾರ್ ಅವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇಮಕ ಮಾಡಿದ್ದಾರೆ.

ರಾಜೀವ್ ಕುಮಾರ್ 1984ರ ಬ್ಯಾಚಿನ ಜಾರ್ಖಂಡ್ ಕೇಡರ್ ನ ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದಾರೆ. ಇವರು ಸಾರ್ವಜನಿಕ ನೀತಿ ಮತ್ತು ಆಡಳಿತ ಕ್ಷೇತ್ರಗಳಲ್ಲಿ 30 ವರ್ಷಗಳಿಗಿಂತ ಹೆಚ್ಚಿನ ಅನುಭವವನ್ನು ಹೊಂದಿದ್ದಾರೆ.

ರಾಜೀವ್ ಕುಮಾರ್ ಅವರನ್ನು ಕಳೆದ ವರ್ಷ ಜುಲೈನಲ್ಲಿ ಹಣಕಾಸು ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು. ಈ ವರ್ಷದ ಫೆಬ್ರವರಿಯಲ್ಲಿ ಅವರ ಸೇವಾವಧಿ ಕೊನೆಗೊಡಂಡಿತ್ತು. ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳಾದ ಪ್ರಧಾನ್ ಮಂತ್ರಿ ಧನ್ ಯೋಜನೆ ಮತ್ತು ಮುದ್ರಾ ಸಾಲ ಯೋಜನೆಯಲ್ಲೂ ಇವರು ಕಾರ್ಯನಿರ್ವಹಿಸಿದ್ದರು.

No Comments

Leave A Comment