Log In
BREAKING NEWS >
ಮಾ.5ರ೦ದು ಬೆಳಿಗ್ಗೆ 8ಗ೦ಟೆಗೆ ಪಣಿಯಾಡಿ ಶ್ರೀಅನ೦ತಪದ್ಮನಾಭ ದೇವಳದ ಗರ್ಭಗುಡಿಯ ಮಹಾದ್ವಾರದ ಹೊಸ್ತಿಲು ಸ್ಥಾಪನೆ ಕಾರ್ಯಕ್ರಮ ಜರಗಲಿದೆ....

ಯೂ ಟ್ಯೂಬ್ ಗೆ ಚಿತ್ರ ಅಪ್ ಲೋಡ್ : ಠಾಣೆ ಮೆಟ್ಟಿಲೇರಿದ ರಾಧಿಕಾ ಕುಮಾರಸ್ವಾಮಿ

ಬೆಂಗಳೂರು: ತಾವು ಅಭಿನಯಿಸಿ, ನಿರ್ಮಿಸಿದ್ದ ಚಲನಚಿತ್ರವನ್ನು ಅಕ್ರಮವಾಗಿ ಯೂಟ್ಯೂಬ್ ಗೆ ಅಪ್‌ಲೋಡ್ ಮಾಡಲಾಗಿದೆ ಎಂದು
ಆರೋಪಿಸಿ ಸ್ಯಾಂಡಲ್ ವುಡ್ ನಟಿ ರಾಧಿಕಾ‌ ಕುಮಾರ್ ಸ್ವಾಮಿ ಠಾಣೆಯ ಮೆಟ್ಟಿಲೇರಿದ್ದಾರೆ.

‘ಸ್ವೀಟಿ ನನ್ನ ಜೋಡಿ’ ಚಲನಚಿತ್ರವನ್ನು ಅಕ್ರಮವಾಗಿ ಯೂಟ್ಯೂಬ್‌ಗೆ ಅಪ್‌ಲೋಡ್ ಮಾಡಲಾಗಿದೆ ಎಂದು ಆರೋಪಿಸಿ ಚಿತ್ರದ ನಿರ್ಮಾಪಕಿಯೂ ಆಗಿರುವ ರಾಧಿಕಾ ಕುಮಾರಸ್ವಾಮಿ ಅವರು ಉತ್ತರ ವಿಭಾಗದ  ಸೈಬರ್ ಠಾಣೆಗೆ ದೂರು ನೀಡಿದ್ದಾರೆ.

3 ಕೋಟಿ ವೆಚ್ಚದಲ್ಲಿ ಸ್ವೀಟಿ ನನ್ನ ಜೋಡಿ ಸಿನಿಮಾ ಮಾಡಿದ್ದೆ. ಯಾರೋ ಆ ಚಲನಚಿತ್ರವನ್ನು ಯೂ ಟ್ಯೂಬ್ ಗೆ ಅಪ್ ಲೋಡ್ ಮಾಡಿದ್ದಾರೆ.ಚಲನಚಿತ್ರ ಪೈರಸಿ ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕಠಿಣ  ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ. ರಾಧಿಕಾ ಕುಮಾರಸ್ವಾಮಿ ದೂರಿನಹಿನ್ನೆಲೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.

No Comments

Leave A Comment