Log In
BREAKING NEWS >
ಕೇಂದ್ರ ಬಜೆಟ್: ಜನವರಿ 30 ರಂದು ಸರ್ವಪಕ್ಷ ಸಭೆ ಕರೆದ ಪ್ರಧಾನಮಂತ್ರಿ ನರೇಂದ್ರ ಮೋದಿ....

ಸರ್ಕಾರಿ, ಮಿಲಿಟರಿ ಗೌರವಗಳೊಂದಿಗೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅಂತ್ಯ ಸಂಸ್ಕಾರ

ನವದೆಹಲಿ: ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಲ್ಲಿನ ಲೋದಿ  ರಸ್ತೆಯಲ್ಲಿರುವ ಚಿತಾಗಾರಾದಲ್ಲಿ ನಡೆಯಿತು.ಪ್ರಣವ್ ಮುಖರ್ಜಿ ಅವರ ಪುತ್ರ  ಅಭಿಜಿತ್ ಮುಖರ್ಜಿ ತಮ್ಮ ತಂದೆಯ ಅಂತ್ಯಸಂಸ್ಕಾರ ನೆರವೇರಿಸಿದರು.

ಪಿಪಿಇ ಕಿಟ್ ಧರಿಸಿದ ಕುಟುಂಬ ಸದಸ್ಯರು, ಸಂಬಂಧಿಕರು ಅಂತಿಮ ವಿಧಿ ವಿಧಾನದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಸರ್ಕಾರಿ ಮತ್ತು ಮಿಲಿಟರಿ ಗೌರವಗಳನ್ನು ಸಮರ್ಪಿಸಲಾಯಿತು.

ಇದಕ್ಕೂ ಮುನ್ನ ರಾಜಾಜಿ ರಸ್ತೆಯಲ್ಲಿರುವ ಅವ ಮನೆಯಲ್ಲಿ ಪಾರ್ಥಿವ ಶರೀರವನ್ನು  ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಾರ್ವಜನಿಕರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡರು. ಈ ವೇಳೆ  ಆರು ಅಡಿ ಅಂತರ ಕಾಯ್ದುಕೊಳ್ಳುವುದರೊಂದಿಗೆ ಮಾಸ್ಕ್ ಕಡ್ಡಾಯಪಡಿಸಲಾಗಿತ್ತು.

ಬಹು ಅಂಗಾಂಗ ವೈಫಲ್ಯ ಹಾಗೂ ಕೊರೋನಾ ವಿರುದ್ಧ  ಮೂರು ವಾರಗಳ ಕಾಲ ಆಸ್ಪತ್ರೆಯಲ್ಲಿ ಹೋರಾಡಿದ್ದ ದೇಶದ 13ನೇ ರಾಷ್ಟ್ರಪತಿ ಸೋಮವಾರ ಸಂಜೆ ನಿಧನರಾಗಿದ್ದರು.

No Comments

Leave A Comment