Log In
BREAKING NEWS >
ಕೇಂದ್ರ ಬಜೆಟ್: ಜನವರಿ 30 ರಂದು ಸರ್ವಪಕ್ಷ ಸಭೆ ಕರೆದ ಪ್ರಧಾನಮಂತ್ರಿ ನರೇಂದ್ರ ಮೋದಿ....

ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್: ಭಾರತದ ಜೂನಿಯರ್ ಕಮಿಷನ್ಡ್ ಆಫೀಸರ್ ಹುತಾತ್ಮ

ಶ್ರೀನಗರ: ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿರುವ ಎಲ್ಓಸಿ ರೇಖೆಯಲ್ಲಿ ಪಾಕಿಸ್ಥಾನ ಮತ್ತೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದೆ. ಈ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಭಾರತದ ಭಾರತದ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಓ) ಒಬ್ಬರು ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ.

ಪಾಕಿಸ್ಥಾನ ಸೇನಾ ಪಡೆಗಳು ಕದನ ವಿರಾಮ ಉಲ್ಲಂಘಿಸಿ ಕೇರಿ ಸೆಕ್ಟರ್ ನ ಫಾರ್ವರ್ಡ್ ಪೋಸ್ಟ್ ಗಳಿಗೆ ಗುಂಡು ಹಾರಿಸಿದೆ. ಪ್ರತ್ಯುತ್ತರವಾಗಿ ಭಾರತೀಯ ಸೇನೆಯೂ ಗುಂಡಿನ ದಾಳಿ ನಡೆಸಿದೆ ಎನ್ನಲಾಗಿದೆ.

ಗುಂಡಿನ ದಾಳಿಯ ವೇಳೆಗೆ ಜೂನಿಯರ್ ಕಮಿಷನ್ಡ್ ಆಫೀಸರ್ ಗಂಭೀರವಾಗಿ ಗಾಯಗೊಂಡಿದ್ದರು. ಆದರೆ ನಂತರ ಮರಣ ಹೊಂದಿದರು ಎಂದು ರಕ್ಷಣಾ ಮೂಲಗಳು ತಿಳಿಸಿದೆ.  ಇದೇ ವೇಳೆ ಪಾಕಿಸ್ಥಾನ ಸೇನೆಯಲ್ಲಿಯೂ ಸಾವು ನೋವುಗಳು ಸಂಭವಿಸಿದೆ ಎನ್ನಲಾಗಿದೆ.

No Comments

Leave A Comment