Log In
BREAKING NEWS >
ಕೇಂದ್ರ ಬಜೆಟ್: ಜನವರಿ 30 ರಂದು ಸರ್ವಪಕ್ಷ ಸಭೆ ಕರೆದ ಪ್ರಧಾನಮಂತ್ರಿ ನರೇಂದ್ರ ಮೋದಿ....

3 ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿ ಹತ್ಯೆ; 20 ದಿನದಲ್ಲಿ 3ನೇ ಪ್ರಕರಣ

ಉತ್ತರಪ್ರದೇಶ/ಲಾಖೀಂಪುರ್ ಖೇರಿ: ಮೂರು ವರ್ಷದ ಪುಟ್ಟ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿ, ನಂತರ ಉಸಿರುಗಟ್ಟಿಸಿ ಸಾಯಿಸಿರುವ ಘಟನೆ ಉತ್ತರಪ್ರದೇಶದ ಲಾಖೀಂಪುರ್ ಪ್ರದೇಶದಲ್ಲಿ ನಡೆದಿದ್ದು, ಕಳೆದ 20 ದಿನಗಳಲ್ಲಿ ಜಿಲ್ಲೆಯಲ್ಲಿ ನಡೆದ ಮೂರನೇ ಪೈಶಾಚಿಕ ಘಟನೆ ಇದಾಗಿದೆ ಎಂದು ವರದಿ ತಿಳಿಸಿದೆ.

ಬುಧವಾರದಿಂದ ಹೆಣ್ಣು ಮಗು ನಾಪತ್ತೆಯಾಗಿತ್ತು. ಗುರುವಾರ(ಸೆಪ್ಟೆಂಬರ್ 02, 2020) ಬೆಳಗ್ಗೆ ಮನೆಯಿಂದ ಅರ್ಧ ಕಿಲೋ ಮೀಟರ್ ದೂರದಲ್ಲಿ ಮಗುವಿನ ಶವ ಪತ್ತೆಯಾಗಿತ್ತು.

ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದು, ಇದೊಂದು ಕೊಲೆ ಪ್ರಕರಣ ಎಂದು ಎಫ್ ಐಆರ್ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಳೆಯ ದ್ವೇಷದ ಹಿನ್ನೆಲೆಯಲ್ಲಿ ತನ್ನ ಮಗುವನ್ನು ಲೇಖ್ ರಾಮ್ ಎಂಬಾತ ಅಪಹರಿಸಿಕೊಂಡು ಹೋಗಿ, ಕೊಂದಿರುವುದಾಗಿ ಮಗುವಿನ ತಂದೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ಆರೋಪಿ ವ್ಯಕ್ತಿಯನ್ನು ಬಂಧಿಸಲು ಪೊಲೀಸರು ನಾಲ್ಕು ತಂಡವನ್ನು ರಚಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸತೇಂದ್ರ ಕುಮಾರ್ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಲಾಖೀಂಪುರ್ ಖೇರಿಯಲ್ಲಿ 17 ವರ್ಷದ ಬಾಲಕಿಯೊಬ್ಬರು ವಿದ್ಯಾರ್ಥಿವೇತನ ಅರ್ಜಿ ತುಂಬಿಸಲು ಮನೆಯಿಂದ ಹೊರ ಹೋಗಿದ್ದ ಸಂದರ್ಭದಲ್ಲಿ ಆಕೆ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈಯಲಾಗಿತ್ತು.

ಗ್ರಾಮದಿಂದ 200 ಮೀಟರ್ ದೂರದಲ್ಲಿ ವಿರೂಪಗೊಳಿಸಿದ ಶವ ಪತ್ತೆಯಾಗಿತ್ತು. ಇದಕ್ಕೂ ಮುನ್ನ ಲಾಖೀಂಪುರ್ ಜಿಲ್ಲೆಯಲ್ಲಿ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಉಸಿರುಗಟ್ಟಿಸಿ ಸಾಯಿಸಿದ್ದ ಘಟನೆ ವರದಿಯಾಗಿತ್ತು.

No Comments

Leave A Comment