ಛತ್ತೀಸ್ ಗಢದಲ್ಲಿ ಭೀಕರ ರಸ್ತೆ ಅಪಘಾತ:ಟ್ರಕ್ ಗೆ ಬಸ್ ಡಿಕ್ಕಿ, 7 ಮಂದಿ ದುರ್ಮರಣ, 7 ಮಂದಿಗೆ ಗಾಯ ರಾಯ್ಪುರ(ಛತ್ತೀಸ್ ಗಢ): ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದು ಏಳು ಮಂದಿ ಸ್ಥಳದಲ್ಲಿಯೇ ಮೃತಪಟ್ಟು, ಏಳು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್ ಗಢದ ರಾಯ್ಪುರದಲ್ಲಿ ನಡೆದಿದೆ. ಒಡಿಶಾದ ಗಂಜಮ್ ನಿಂದ ಗುಜರಾತ್ ನ ಸೂರತ್ ಗೆ ಬಸ್ ಪ್ರಯಾಣಿಸುತ್ತಿತ್ತು. ಇಂದು ನಸುಕಿನ ಜಾವ ಈ ದುರ್ಘಟನೆ ಸಂಭವಿಸಿದೆ ಎಂದು ರಾಯ್ಪುರದ ಎಸ್ ಎಸ್ ಪಿ ಅಜಯ್ ಯಾದವ್ ತಿಳಿಸಿದ್ದಾರೆ. ಪರಿಹಾರ ಘೋಷಣೆ:ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಪಘಾತದಲ್ಲಿ ತೊಂದರೆಗೀಡಾದವರ ಕುಟುಂಬಗಳ ನೆರವಿಗೆ ತಕ್ಷಣ ಧಾವಿಸುವಂತೆ ಸಿಎಂ ನವೀನ್ ಪಟ್ನಾಯಕ್ ಸಚಿವ ಸುಶಾಂತ್ ಸಿಂಗ್ ಅವರಿಗೆ ಸೂಚಿಸಿದ್ದಾರೆ. Share this:TweetWhatsAppEmailPrintTelegram