Log In
BREAKING NEWS >
ಸೋಮವಾರದಿ೦ದ ಚಿನ್ನಾಭರಣದ ಅ೦ಗಡಿ ಅಲ್ ಲಾಕ್ -ಚಿನ್ನ ಖರೀದಿಸಲೊ೦ದು ಅವಕಾಶ...

ಉಡುಪಿ: ಗಾಂಜಾ ಸೇವನೆ, ಮಾರಾಟ ಮಾಡುತ್ತಿದ್ದ ಐವರ ಬಂಧನ

ಉಡುಪಿ:ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಅಕ್ರಮ ಗಾಂಜಾ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಲಾಡ್ಜ್ ಒಂದರಲ್ಲಿ ಗಾಂಜಾ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಪೊಲೀಸರು ದಾಳಿ ನಡೆಸಿ ಬಂಧಿಸಲಾಗಿದೆ.

ಬ್ರಹ್ಮಾವರದ ಮಟಪಾಡಿ ನಿವಾಸಿ ಯೋಗೇಶ್ ಗಾಣಿಗ(24), ಕೇರಳ ತಿರುವನಂತಪುರಂ ನಿವಾಸಿ ಯದು ನಾರಾಯಣ(21), ಬೈಂದೂರು ಬಿಜೂರು ನಿವಾಸಿ ಗುರುರಾಜ್ ಪೂಜಾರಿ(25), ಉಪ್ಪುಂದ ನಿವಾಸಿ ಸುನಿಲ್ ಪೂಜಾರಿ(26), ಬಿಜೂರು ನಿವಾಸಿ ರವಿ(25) ಬಂಧಿತ ಆರೋಪಿಗಳಾಗಿದ್ದಾರೆ.

ಅಧಿಕೃತ ಮಾಹಿತಿ ಆಧರಿಸಿ ಉಪ್ಪುಂದದ ಪ್ರಸಿದ್ಧ ಲಾಡ್ಜ್ ಗೆ ಬೈಂದೂರು ಪೊಲೀಸರು ದಾಳಿ ಮಾಡಿದಾಗ ಆರೋಪಿಗಳು ರೂಮಿನೊಳಗೆ ಗಾಂಜಾ ಸೇವಿಸುತ್ತಿದ್ದರು.

ಆರೋಪಿ ಯೋಗೇಶ್ ಗಾಣಿಗ ಎಂಬಾತನ ಬ್ಯಾಗಿನಲ್ಲಿ 40 ಗ್ರಾಂ ಗಾಂಜಾ ಪತ್ತೆಯಾಗಿದೆ. ಆರೋಪಿಗಳಿಗೆ ಭಟ್ಕಳ ಮೂಲದ ಶಬೀರ್ ಎಂಬಾತ ಗಾಂಜಾ ಸರಬರಾಜು ಮಾಡುತ್ತಿದ್ದ ಎನ್ನಲಾಗಿದೆ. ಆರೋಪಿಗಳಿಂದ 1,71,500.00 ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

No Comments

Leave A Comment