Log In
BREAKING NEWS >
ಸೋಮವಾರದಿ೦ದ ಚಿನ್ನಾಭರಣದ ಅ೦ಗಡಿ ಅಲ್ ಲಾಕ್ -ಚಿನ್ನ ಖರೀದಿಸಲೊ೦ದು ಅವಕಾಶ...

ಮಹಿಳಾ ಡ್ರಗ್ ಪೆಡ್ಲರ್ ಪೃಥ್ವಿಶೆಟ್ಟಿ ಕಂಪನಿಯಲ್ಲಿ ನಟಿ ಸಂಜನಾ ಪಾಲುದಾರೆ!

ಬೆಂಗಳೂರು: ಬೆಂಗಳೂರಿನಲ್ಲಿ ಇವೆಂಟ್ ಮ್ಯಾನೇಜ್ಮೆಂಟ್ ನಡೆಸುತ್ತಿದ್ದ ಪೃಥ್ವಿ ಶೆಟ್ಟಿ ಕಂಪನಿಯಲ್ಲಿ ಸಂಜನಾ ಸಹ ಪಾಲುದಾರೆ ಎಂಬ ಮಾಹಿತಿ ಸಿಕ್ಕಿದೆ.ಈಕೆ ಹಾಗೂ ಸಂಜನಾ ನಡುವೆ ಲಕ್ಷಾಂತರ ರೂಪಾಯಿ ವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ದಾಖಲೆಗಳನ್ನು ಕೆದಕಿದಾಗ ದೊಡ್ಡ ದೊಡ್ಡ ಹೋಟೆಲ್‌ಗಳಲ್ಲಿ ಪಾರ್ಟಿಗಳನ್ನು ಆಯೋಜನೆ ಮಾಡಿದ ಬಗ್ಗೆ ಪುರಾವೆಗಳು ದೊರೆತಿವೆ.

ಇವರಿಬ್ಬರು ಬರೀ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ನಡೆಸುತ್ತಿದ್ದರೇ ಅಥವಾ ಬೇರೆ ಯಾವೆಲ್ಲಾ ವ್ಯವಹಾರಗಳನ್ನು ನಡೆಸುತ್ತಿದ್ದರು ಎಂಬುದರ ಬಗ್ಗೆ ಹಲವು ಪ್ರಶ್ನೆಗಳು ಎದ್ದಿದೆ.ಪಾರ್ಟಿಗಳಲ್ಲಿ ಏನು ಬಳಕೆ ಆಗುತ್ತಿತ್ತು? ಯಾರೆಲ್ಲ ಬರುತ್ತಿದ್ದರು ಎಂಬುದರ ಬಗ್ಗೆ ಪೃಥ್ವಿ ಶೆಟ್ಟಿ ತಿಳಿಸಿದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂಬ ಮಾಹಿತಿ ಸಿಕ್ಕಿದೆ.

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಮೂಲದ ಡ್ರಗ್ ಪೆಡ್ಲರ್ ಪೃಥ್ವಿ ಶೆಟ್ಟಿ ಹಾಗೂ ರಾಹುಲ್ ನೀಡಿದ್ದ ಹೇಳಿಕೆಯ ಆಧಾರದಲ್ಲಿ ನಟಿ ಸಂಜನಾ ನಿವಾಸದ ಮೇಲೆ  ಮಂಗಳವಾರ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

No Comments

Leave A Comment