Log In
BREAKING NEWS >
ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಉಡುಪಿ:ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವ: ಶ್ರೀಗಳಿ೦ದ ಲಡ್ಡಿಗೆ,ಶ್ರೀದೇವರಿಗೆ ತೊಟ್ಟಿಲಿನಲ್ಲಿ ಬಾಲಕೃಷ್ಣ” ಅಲಂಕಾರ, ಸಾಂಸ್ಕೃತಿಕ ಕಾರ್ಯಕ್ರಮ(ಅನೇಕ ಚಿತ್ರಗಳಿವೆ)

ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವದ ಪ್ರಯುಕ್ತ ದೇವರ ವಿಶೇಷ ಪೂಜೆಗಾಗಿ ಲಡ್ಡಿಗೆಯನ್ನು ತಯಾರಿಸಲು ಪರ್ಯಾಯ ಅದಮಾರು ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು,ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು,ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥಶ್ರೀಪಾದರು,ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಚಾಲನೆ ನೀಡಿದರು.

ಶ್ರೀ ಕೃಷ್ಣ ಮಠದಲ್ಲಿ, ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥಶ್ರೀಪಾದರು ಶ್ರೀ ಕೃಷ್ಣ ದೇವರಿಗೆ “ತೊಟ್ಟಿಲಿನಲ್ಲಿ ಬಾಲಕೃಷ್ಣ” ಅಲಂಕಾರ ಮಾಡಿದರು. ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಲಕ್ಷ ತುಳಸಿ ಅರ್ಚನೆಯೊಂದಿಗೆ ಮಹಾಪೂಜೆಯನ್ನು ನೆರವೇರಿಸಿದರು.

ಬಾಲಕ ಸುವೀರ ಕೃಷ್ಣರವರಿ೦ದ ಶ್ರೀಕೃಷ್ಣನ ವೇಷ…

 


ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ,ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ದಾಮೋದರ ಶೇರಿಗಾರ್ ಮತ್ತು ಬಳಗದವರಿಂದ ಸೆಕ್ಸಾಫೋನ್ ವಾದನ ನಡೆಯಿತು.

ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ,ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಪಾವನ ಬಿ.ಆಚಾರ್ಯ ಇವರಿಂದ ವೀಣಾ ವಾದನ ನಡೆಯಿತು.

No Comments

Leave A Comment