Log In
BREAKING NEWS >
ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಭಾರತದಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ: ಒಂದೇ ದಿನ 94,372 ಮಂದಿಯಲ್ಲಿ ವೈರಸ್ ಪತ್ತೆ, 3 ದಿನದಲ್ಲಿ ಸೋಂಕಿತರ ಸಂಖ್ಯೆ 50 ಲಕ್ಷಕ್ಕೆ ಏರಿಕೆ ಸಾಧ್ಯತೆ

ನವದೆಹಲಿ: ದಾಖಲೆಯ ಪ್ರಮಾಣದಲ್ಲಿ ಹೊಸ ಸೋಂಕಿತರು ಪತ್ತೆಯಾಗುವ ಪರ್ವ ದೇಶದಲ್ಲಿ ಮುಂದುವರೆಸಿದ್ದು, ಭಾನುವಾರ ಕೂಡ ಭಾರತದಲ್ಲಿ 94,372 ಜನರದಲ್ಲಿ ಕೊರೋನಾ ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 47 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ ಕೆಲ ದಿನಗಳಿಂದ ನಿತ್ಯ 90,000ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್ದು, ಇದೇ ರೀತಿ ಮುಂದುವರೆದರೆ ಇನ್ನು 3 ದಿನಗಳಲ್ಲಿ ಸೋಂಕಿತರ ಸಂಖ್ಯೆ 50 ಲಕ್ಷ ಗಡಿ ದಾಟುವುದು ಖಚಿತವಾಗಿದೆ. ಪ್ರಸ್ತುತ ದೇಶದಲ್ಲಿ ಸೋಂಕಿತರ ಸಂಖ್ಯೆ 47,54,357ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,114 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಈವರೆಗೆ ಮೃತರ ಸಂಖ್ಯೆ 78,586ಕ್ಕೆ ಏರಿಕೆಯಾಗಿದೆ.

ಇನ್ನು 47,54,357 ಮಂದಿ ಸೋಂಕಿತರ ಪೈಕಿ ಈ ವರೆಗೂ 37,02,596 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 9,73,175 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ ಹೊಸದಾಗಿ 22,084  ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 391 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, ನಿನ್ನೆ ಮತ್ತೆ ಆಂಧ್ರಪ್ರದೇಶದಲ್ಲಿ 9901 (67 ಸಾವು), ಕರ್ನಾಟಕ 9140 (94 ಸಾವು), ಉತ್ತರಪ್ರದೇ 6784 (67 ಸಾವು), ಹಾಗೂ ದೆಹಲಿಯಲ್ಲಿ 4321 ಮಂದಿಗೆ ಹೊಸದಾಗಿ ಸೋಂಕು ವ್ಯಾಪಿಸಿದ್ದು, 28 ಮಂದಿ ಬಲಿಯಾಗಿದ್ದಾರೆ.

No Comments

Leave A Comment