Log In
BREAKING NEWS >
ನ್ಯಾಯಾಲಯ ಲಸಿಕೆಯ ಬಗ್ಗೆ ರಾಜ್ಯ ಸರಕಾರಕ್ಕೆ ಪ್ರಶ್ನಿಸಿದ್ದಕ್ಕೆ ಸಿಟಿರವಿ,ಕೇ೦ದ್ರ ಸಚಿವ ಸದಾನ೦ದ ಗೌಡರ ವರ್ತನೆಗೆ ರಾಜ್ಯದ ಎಲ್ಲೆಡೆ ಭಾರೀ ಆಕ್ರೋಶ....

ಮತ್ತೆ ಪೊಲೀಸ್ ಕಸ್ಟಡಿಗೆ ಕೇಳ್ಬೇಡಿ- ಅಧಿಕಾರಿಗಳ ಮುಂದೆ ರಾಗಿಣಿ, ಸಂಜನಾ ಗೋಳು

ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆಯಿಂದ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ರೋಸಿ ಹೋಗಿದ್ದಾರೆ. ಹೀಗಾಗಿ ಮತ್ತೆ ಪೊಲೀಸ್ ಕಸ್ಟಡಿಗೆ ಕೇಳಬೇಡಿ ಎಂದು ಪೊಲೀಸರ ಬಳಿ ನಟಿಯರು ಗೋಳಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪೊಲೀಸ್ ಕಸ್ಟಡಿ ಸಾಕಪ್ಪಾ ಸಾಕು. ಬೇಕಾದರೆ ಕಸ್ಟಡಿಯಿಂದ ನಮ್ಮನ್ನ ಜೈಲಿಗೆ ಕಳಿಸಿ ಎಂದು ನಟಿಮಣಿಯರು ಕೇಳಿಕೊಂಡಿದ್ದಾರೆ. ಒಟ್ಟಿನಲ್ಲಿ ಪೊಲೀಸರ ತನಿಖೆಯಿಂದ ರೋಸಿ ಹೋಗಿರುವ ನಟಿಯರಿಗೆ ಕಸ್ಟಡಿಯಲ್ಲಿ ಇದ್ದಷ್ಟು ದಿನ ಬೇಲ್ ಸಿಗೋದಿಲ್ಲ ಅನ್ನೋದು ಗೊತ್ತಾಗಿದೆ. ಹೀಗಾಗಿ ಪೊಲೀಸ್ ಕಸ್ಟಡಿಗೆ ಮತ್ತೆ ತೆಗೆದುಕೊಳ್ಳಬೇಡಿ ಅಂತ ತನಿಖಾಧಿಕಾರಿ ಮುಂದೆ ರಾಗಿಣಿ ಮತ್ತು ಸಂಜನಾ ತಮ್ಮ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.ಮೆಡಿಕಲ್ ಅಲ್ಲಿ, ಇಲ್ಲಿ ಕರೆದೊಯ್ಯುತ್ತಿರುತ್ತೀರಿ.

ಮಾಧ್ಯಮದವರು ಕೂಡ ನಮ್ಮನ್ನು ಫಾಲೋ ಮಾಡಿಕೊಂಡು ಬರುತ್ತಿದ್ದಾರೆ. ಜನ ನಮ್ಮನ್ನ ನೋಡ್ತಿರೋದ್ರಿಂದ ಮುಜುಗರವಾಗ್ತಿದೆ. ದಯಮಾಡಿ ಕಸ್ಟಡಿ ಅಂತ್ಯ ಮಾಡಿಕೊಡಿ ಅಂತ ಹೇಳುತ್ತಿದ್ದು, ನಟಿಮಣಿಯರು ನ್ಯಾಯಾಂಗ ಬಂಧನಕ್ಕೆ ಹೋದ್ರೆ ಬೇಲ್ ಸಿಗುವ ನಿರೀಕ್ಷೆಯಲ್ಲಿದ್ದಾರೆ.

ನಾಳೆ ತುಪ್ಪದ ಬೆಡಗಿಯ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ ಎನ್‍ಡಿಪಿಎಸ್ ಕೋರ್ಟಿನಲ್ಲಿ ರಾಗಿಣಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಈ ಜಾಮೀನು ಅರ್ಜಿಯ ವಿಚಾರಣೆ ನಾಳೆ ನಡೆಯಲಿದೆ.

ಇತ್ತ ನಾಳೆ ಎನ್‍ಡಿಪಿಎಸ್ ಕೋರ್ಟಿಗೆ ನಟಿ ಸಂಜನಾ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ. ಇದೇ ವೇಳೆ 1ನೇ ಎಸಿಎಂಎಂ ಕೋರ್ಟಿನಲ್ಲಿ ವಿಚಾರಣೆ ನಡೆಯಲಿದೆ. ನಾಳೆಯೇ ರಾಗಿಣಿ, ಸಂಜನಾ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ಮತ್ತಷ್ಟು ದಿನ ಇಬ್ಬರೂ ನಟಿಯರನ್ನ ಕಸ್ಟಡಿಗೆ ನೀಡುವಂತೆ ಪೊಲೀಸರು ಕೇಳುವ ಸಾಧ್ಯತೆಗಳು ಹೆಚ್ಚಾಗಿವೆ.

No Comments

Leave A Comment