Log In
BREAKING NEWS >
ಪ೦ಚ ಸ್ವಾಮೀಜಿಯವರ ದಿವ್ಯ ಹಸ್ತದಿ೦ದ ದೀಪ ಪ್ರಜ್ವಲನೆಯೊ೦ದಿಗೆ ಮುಷ್ಠಿ ಎಳ್ಳು ಸಮರ್ಪಣೆಯೊ೦ದಿಗೆ ಶ್ರೀಕೃಷ್ಣನದರ್ಶನಕ್ಕೆ ಚಾಲನೆ...ಡ್ರಗ್ಸ್ ದ೦ಧೆ ಪ್ರಕರಣ:ಇಬ್ಬರು ನಟಿಮಣಿಯರಿಗಿಲ್ಲ ಜಾಮೀನು ಭಾಗ್ಯ-ಸೆ.30ಕ್ಕೆ ಮತ್ತೆ ವಿಚಾರಣೆ

ಚಾರ್ಮಾಡಿ ಘಾಟ್: ನಿಯಂತ್ರಣ ತಪ್ಪಿ ಪಲ್ಟಿಯಾಗಿ ಜಲಪಾತದತ್ತ ನುಗ್ಗಿದ ಕಾರು

ಚಿಕ್ಕಮಗಳೂರು: ಇಲ್ಲಿನ ಚಾರ್ಮಾಡಿ ಘಾಟ್ ನಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರವಿವಾರ ನಡೆದಿದೆ,

ಮೂಡಿಗೆರೆ ತಾಲೂಕಿನ ಸೋಮನಕಾಡು ಬಳಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಂಜು ಕವಿದ ಹಿನ್ನೆಲೆಯಲ್ಲಿ ದಾರಿ ಕಾಣದೆ ಘಟನೆ ನಡೆದಿದೆ ಎನ್ನಲಾಗಿದೆ. ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು ಜಲಪಾತದತ್ತ ನುಗ್ಗಿತ್ತು.

ದಾವಣಗೆರೆ ಮೂಲದ ಐದು ಮಂದಿ ಕಾರಿನಲ್ಲಿ ಧರ್ಮಸ್ಥಳ ಕಡೆ ಪ್ರಯಾಣಿಸುತ್ತಿದ್ದರು. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಸ್ಥಳೀಯರು ಆಗಮಿಸಿದ ಹಿಟಾಚಿ ಸಹಾಯದಿಂದ ಕಾರನ್ನು ಮೇಲಕ್ಕೆತ್ತಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

No Comments

Leave A Comment