Log In
BREAKING NEWS >
ನ್ಯಾಯಾಲಯ ಲಸಿಕೆಯ ಬಗ್ಗೆ ರಾಜ್ಯ ಸರಕಾರಕ್ಕೆ ಪ್ರಶ್ನಿಸಿದ್ದಕ್ಕೆ ಸಿಟಿರವಿ,ಕೇ೦ದ್ರ ಸಚಿವ ಸದಾನ೦ದ ಗೌಡರ ವರ್ತನೆಗೆ ರಾಜ್ಯದ ಎಲ್ಲೆಡೆ ಭಾರೀ ಆಕ್ರೋಶ....

ಸ್ಯಾಂಡಲ್’ವುಡ್ ಡ್ರಗ್ಸ್ ದಂಧೆಗೆ ಹವಾಲಾ ನಂಟು: ತನಿಖೆ ಆರಂಭಿಸಿದ ಇಡಿ!

ಬೆಂಗಳೂರು: ಸ್ಯಾಂಡಲ್’ವುಡ್ ಡ್ರಗ್ಸ್ ದಂಧೆಗೆ ಹವಾಲಾ ನಂಟಿದೆ ಎಂಬ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸ್ಯಾಂಡಲ್’ವುಡ್ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಇಬ್ಬರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಸಿಸಿಬಿ ಪೊಲೀಸರು ಇಬ್ಬರನ್ನೂ ಬಂಧನಕ್ಕಕೊಳಪಡಿಸಿದ್ದಾರೆ.

ಈ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಕೂಡ ನಡೆದಿರುವ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಕೂಡ ತನಿಖೆ ನಡೆಸುತ್ತಿದೆ. ಆದರೆ, ಈ ಸಂಬಂಧ ನಟಿ ರಾಗಿಣಿ ಹಾಗೂ ಸಂಜನಾ ಇಬ್ಬರಿಗೂ ಯಾವುದೇ ನೋಟಿಸ್ ಗಳನ್ನು ಜಾರಿ ಮಾಡಿಲ್ಲ ಎಂದು ಮೂಲಗಳು ಮಾಹಿತಿ ನೀಡಿವೆ.

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆಯಾಗಿರುವುದು ಕಂಡು ಬಂದಿದೆ. ಇದು ಸಣ್ಣ ಮಟ್ಟದ ಪ್ರಕರಣವಲ್ಲ. ದೊಡ್ಡ ದೊಡ್ಡ ಕೈಗಳು ಇದರಲ್ಲಿ ಸೇರಿವೆ. ಕಾಟನ್ ಪೇಟೆ ಡ್ರಗ್ಸ್ ಪ್ರಕರಣವಲ್ಲದೆ, ಇದೇ ವಾರ ನಗರ ಪೊಲೀಸರು ಕಲಬುರಗಿಯಲ್ಲಿ ರೂ.6 ಕೋಟಿ ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಇನ್ನು ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ಪೊಲೀಸರು ದಾಖಲು ಮಾಡಿಕೊಂಡಿರುವ ಎಫ್ಐಆರ್ ಗಳನ್ನು ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

No Comments

Leave A Comment