ಪಾದಚಾರಿ ಮಹಿಳೆಗೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಮಹಿಳೆಯ ಸಾವು
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದ ಅಡ್ಯಾರು ಕಟ್ಟೆಯ ಬಳಿ ಪಡೀಲು ಗ್ರಾಮದ ಮಹಿಳೆ ಉದ್ಯೋಗಕ್ಕೆಂದು ತೆರಳುವ ಸಮಯದಲ್ಲಿ ರಸ್ತೆ ದಾಟುತ್ತಿದ್ದಾಗ ಬೈಕ್ ಬಂದು ಡಿಕ್ಕಿ ಹೊಡೆದಿದೆ.ಅದರ ಪರಿಣಾಮ ಪಾದಚಾರಿ ಮಹಿಳೆ ರಸ್ತೆಯಲ್ಲೇ ಬಿದ್ದು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.
ಸುಮಾರು 50 ವರುಷ ಪ್ರಾಯದ ಮಹಿಳೆ ಕೆಲಸಕೆಂದು ತೆರಳುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.ಮೃತ ದೇಹವನ್ನು ಕಂಕನಾಡಿ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ನಾಗುರಿ ಸಂಚಾರ ವಿಭಾಗದ ಪೊಲೀಸರು ಸ್ಥಳಕ್ಕೆ ಆಗಮಿಸಿ ಕೇಸು ದಾಖಲಿಸಿದ್ದಾರೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.