Log In
BREAKING NEWS >
ಘರ್ಷಣೆ, ಹಿಂಸಾಚಾರಕ್ಕೆ ತಿರುಗಿದ ಟ್ರ್ಯಾಕ್ಟರ್ ಪರೇಡ್: ಪೊಲೀಸರಿಂದ ಅಶ್ರುವಾಯು, ಲಾಠಿಚಾರ್ಜ್ ಪ್ರಯೋಗ, ದೆಹಲಿಯಲ್ಲಿ ಪರಿಸ್ಥಿತಿ ಉದ್ವಿಗ್ನ ...

ಚಿಕ್ಕಬಳ್ಳಾಪುರ: ಕಾರಿಗೆ ಲಾರಿ ಡಿಕ್ಕಿ, ತಾಯಿ-ಮಕ್ಕಳ ದುರ್ಮರಣ

ಚಿಕ್ಕಬಳ್ಳಾಪುರ: ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿ, ತಂದೆ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಕಳೆದ ರಾತ್ರಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ  ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಪ್ಯಾಯಲಗುರ್ಕಿ ಬಳಿ ನಡೆದಿದೆ.

ಬೆಂಗಳೂರಿನಿಂದ ಹೈದರಾಬಾದ್ ಗೆ ತಂದೆ, ತಾಯಿ, ಇಬ್ಬರು ಮಕ್ಕಳು ಸ್ವಿಫ್ಟ್ ಕಾರಿನಲ್ಲಿ ಹೋಗುತ್ತಿದ್ದರು. ಈ ಕಾರಿಗೆ ದೊಡ್ಡಪ್ಯಾಯಲಗುರ್ಕಿ ಬಳಿ ರಾತ್ರಿ 1ರ ವೇಳೆ ಲಾರಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಡಿಕ್ಕಿಯ ರಭಸಕ್ಕೆ ತಾಯಿ ಹಾಗೂ ಇಬ್ಬರು ಗಂಡು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಂದೆ ಸ್ಥಿತಿ ಗಂಭೀರವಾಗಿದ್ದು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹೈದರಾಬಾದ್ ಮೂಲದವರು ಎಂದು ತಿಳಿದುಬಂದಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು  ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

No Comments

Leave A Comment