Log In
BREAKING NEWS >
ಘರ್ಷಣೆ, ಹಿಂಸಾಚಾರಕ್ಕೆ ತಿರುಗಿದ ಟ್ರ್ಯಾಕ್ಟರ್ ಪರೇಡ್: ಪೊಲೀಸರಿಂದ ಅಶ್ರುವಾಯು, ಲಾಠಿಚಾರ್ಜ್ ಪ್ರಯೋಗ, ದೆಹಲಿಯಲ್ಲಿ ಪರಿಸ್ಥಿತಿ ಉದ್ವಿಗ್ನ ...

ಗೃಹ ಸಚಿವ ಬಸವರಾಜ ಬೊಮ್ಮಾಯಿಗೂ ಒಕ್ಕರಿಸಿದ ಕೊರೋನಾ!

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಬಳಿಕ ಇಡೀಗ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೂ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಈ ಕುರಿತು ಸ್ವತಃ ಬಸವರಾಜ ಬೊಮ್ಮಾಯಿಯವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಕೊರೋನಾ ಪರೀಕ್ಷೆಗೊಳಪಟ್ಟಿದ್ದು, ನನಗೆ ಸೋಂಕು ದೃಢಪಟ್ಟಿದೆ. ಆದರೆ, ಯಾವುದೇ ರೀತಿಯ ಲಕ್ಷಣಗಳು ಕಂಡು ಬಂದಿಲ್ಲ, ಪ್ರಸ್ತುತ ಆರೋಗ್ಯವಾಗಿಯೇ ಇದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿದ್ದೇನೆಂದು ಹೇಳಿದ್ದಾರೆ.

ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಲಸದ ಹುಡುಗನಿಗೆ ನಿನ್ನೆ ಕೊರೋನಾ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ನಾನೂ ಕೂಡ ಪರೀಕ್ಷೆಗೊಳಪಟ್ಟಿದ್ದೆ. ನನಗೂ ಕೂಡ ಸೋಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆಂದು ಹೇಳಿದ್ದಾರೆ.

ಮತ್ತೊಂದು ಟ್ವೀಟ್’ನಲ್ಲಿ ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆಂದು ತಿಳಿಸಿದ್ದಾರೆ.

No Comments

Leave A Comment