Log In
BREAKING NEWS >
ಪ೦ಚ ಸ್ವಾಮೀಜಿಯವರ ದಿವ್ಯ ಹಸ್ತದಿ೦ದ ದೀಪ ಪ್ರಜ್ವಲನೆಯೊ೦ದಿಗೆ ಮುಷ್ಠಿ ಎಳ್ಳು ಸಮರ್ಪಣೆಯೊ೦ದಿಗೆ ಶ್ರೀಕೃಷ್ಣನದರ್ಶನಕ್ಕೆ ಚಾಲನೆ...ಡ್ರಗ್ಸ್ ದ೦ಧೆ ಪ್ರಕರಣ:ಇಬ್ಬರು ನಟಿಮಣಿಯರಿಗಿಲ್ಲ ಜಾಮೀನು ಭಾಗ್ಯ-ಸೆ.30ಕ್ಕೆ ಮತ್ತೆ ವಿಚಾರಣೆ

ಡ್ರಗ್ಸ್ ಪ್ರಕರಣ: ನಟಿ ರಾಗಿಣಿ ಜಾಮೀನು ಅರ್ಜಿವಿಚಾರಣೆ ಮುಂದೂಡಿಕೆ

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.

ಸೋಮವಾರ  14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ನಟಿ ರಾಗಿಣಿಯವರ ಜಾಮೀನು ಅರ್ಜಿ ಇಂದು ನ್ಯಾಯಾಲಯದ ಮುಂದೆ ಬಂದಾಗ ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ  ಮುಂದೂಡಿ ಆದೇಶಿಸಿದೆ.

ತನಿಖೆ ಪ್ರಗತಿಯಲ್ಲಿದ್ದು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಬೇಕೆಂದು ಸಿಸಿಬಿ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯ ವಿಚಾರಣೆಯನ್ನು ಮತ್ತೆ ಮೂರು ದಿನಗಳ ಕಾಲ ಮುಂಡೂಡಿದೆ. ಇದರಿಂದ ನಟಿ ರಾಗಿಣಿಗೆ ಇನ್ನೂ ಮೂರು ದಿನಗಳ ಕಾಲ ಜೈಲು ವಾಸ ಖಚಿತವಾದಂತಾಗಿದೆ.

ಇದೇ ವೇಳೆ ಇನ್ನೋರ್ವ ನಟಿ ಸಂಜನಾ  ಗಲ್ರಾನಿ ಪೊಲೀಸ್ ಕಸ್ಟಡಿ ಇಂದಿಗೆ ಕೊನೆಯಾಗಲಿದ್ದು ಆಕೆಯನ್ನು ಇಂದು ಪೋಲೀಸರು ನ್ಯಾಯಾಲಯದ  ಮುಂದೆ ಹಾಜರು ಪಡಿಸಲಿದ್ದಾರೆ. ಇನ್ನೊಬ್ಬ ಕನ್ನಡ ಚಿತ್ರರಂಗದ ಸ್ಟಾರ್ ಕಪಲ್ ಗಳಾದ ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೆ ಸಹ ಇಂದು ಸಿಸಿಬಿ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

No Comments

Leave A Comment