Log In
BREAKING NEWS >
ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಸ್ಯಾಂಡಲ್’ವುಡ್ ಡ್ರಗ್ಸ್ ದಂಧೆ ಪ್ರಕರಣ: ಸಿಸಿಬಿ ಎದುರು ನಟ ದಿಗಂತ್, ಐಂದ್ರಿತಾ ಹಾಜರ್

ಬೆಂಗಳೂರು: ಸ್ಯಾಂಡಲ್ ವುಡ್ ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೇ ಅವರು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬುಧವಾರ ವಿಚಾರಣೆಗೆ ಹಾಜರಾಗಿದ್ದಾರೆ.

ಡ್ರಗ್ಸ್ ಪ್ರಕರಣ ಸಂಬಂಧ ಮಾಹಿತಿ ಪಡೆಯಲು ವಿಚಾರಣೆಗೆ ಹಾಜರಾಗುವಂತೆ ದಂಪತಿಗೆ ಸಿಸಿಬಿ ಮಂಗಳವಾರ ನೋಟಿಸ್ ನೀಡಿತ್ತು. ನೋಟಿಸ್‌ಗೆ ಉತ್ತರಿಸಿದ್ದ ಇಬ್ಬರೂ ತನಿಖೆಗೆ ಸಹಕಾರ ನೀಡುವುದಾಗಿ ತಿಳಿಸಿದ್ದರು.

ಸಿಸಿಬಿ ಕಚೇರಿಗೆ ಆಗಮಿಸುತ್ತಿದ್ದಂತೆ ದಂಪತಿಗಳಿಬ್ಬರ ಮೊಬೈಲ್ ಅನ್ನು ತನಿಖಾಧಿಕಾರಿಗಳು ವಶಕ್ಕೆ ಪಡೆದು, ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಿದ್ದಾರೆ.

No Comments

Leave A Comment