Log In
BREAKING NEWS >
ಶ್ರೀಕೃಷ್ಣಮಠದ ಮುಖ್ಯದ್ವಾರದಲ್ಲಿ ಕನ್ನಡ ನಾಮಫಲಕ ಅಳವಡಿಕೆ-ಗದ್ದಲವೆಬ್ಬಿಸಿದ ಪೆರ೦ಪಳ್ಳಿಗೆ ತೀವ್ರ ಮುಖಭ೦ಗ........ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಸುಶಾಂತ್ ಕೇಸ್ ಬೆನ್ನಲ್ಲೇ ನಟಿ ಆತ್ಮಹತ್ಯೆ ಪ್ರಕರಣ ತೆಲುಗಿನ ಖ್ಯಾತ ನಿರ್ಮಾಪಕನ ಬಂಧನ

ಹೈದರಾಬಾದ್: ಕಿರುತೆರೆ ನಟಿಯೊಬ್ಬಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗಿನ ಹೆಸರಾಂತ ನಿರ್ಮಾಪಕರೊಬ್ಬರನ್ನು ಬಂಧಿಸಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ. ಈಗಾಗಲೇ ಬಾಲಿವುಡ್ ನಲ್ಲಿ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿರುವ ನಡುವೆ ತೆಲುಗು ಸಿನಿಮಾರಂಗದಲ್ಲಿ ಈ ಘಟನೆ ನಡೆದಿದೆ.

ಹೈದರಾಬಾದ್ ನ ಮಧುರಾ ನಗರದಲ್ಲಿರುವ ಅಪಾರ್ಟ್ ಮೆಂಟ್ ನ ಬಾತ್ ರೂಂನಲ್ಲಿ ಟೆಲಿವಿಷನ್ ನಟಿ ಕೊಂಡಪಲ್ಲಿ ಶ್ರಾವಣಿ ಸೆಪ್ಟೆಂಬರ್ 8ರಂದು ಶವವಾಗಿ ಪತ್ತೆಯಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ತೆಲುಗಿನ ಬ್ಲಾಕ್ ಬಸ್ಟರ್ “ಆರ್ ಎಕ್ಸ್ 100” ಸಿನಿಮಾದ ನಿರ್ಮಾಪಕ ಅಶೋಕ್ ರೆಡ್ಡಿಯನ್ನು ಬುಧವಾರ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಶ್ರಾವಣಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಸಾಯಿ ಕೃಷ್ಣ ರೆಡ್ಡಿ ಮತ್ತು ದೇವರಾಜ್ ರೆಡ್ಡಿ ಕೂಡಾ ಆರೋಪಿಗಳಾಗಿದ್ದಾರೆ. ಇಬ್ಬರನ್ನೂ ಬಂಧಿಸಿದ್ದು, ಸೋಮವಾರದವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

No Comments

Leave A Comment