Log In
BREAKING NEWS >
ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ಯುವಕನ ಕೊಚ್ಚಿಕೊಲೆ....ಗುಜರಾತ್​ನ ONGC ಘಟಕದಲ್ಲಿ ಬೆಂಕಿ ಅವಘಡ; ಬೆಳ್ಳಂಬೆಳಗ್ಗೆ ಭಾರೀ ಸ್ಫೋಟಕ್ಕೆ ಬೆಚ್ಚಿಬಿದ್ದ ಜನ....

ಬೆಂಗಳೂರು: ಬಿಜೆಪಿಯ ನೂತನ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಕೊರೋನಾಗೆ ಬಲಿ

ಬೆಂಗಳೂರು: ಇತ್ತೀಚಿಗಷ್ಟೇ ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಶೋಕ್​ ಗಸ್ತಿ(55) ಅವರು ಮಹಾಮಾರಿ ಕರೋನಾ ವೈರಸ್​ನಿಂದ ಗುರುವಾರ ಮೃತಪಟ್ಟಿದ್ದಾರೆ.

15 ದಿನಗಳ ಹಿಂದೆ ಗಸ್ತಿ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿತ್ತು. ಅಂದಿನಿಂದ ನಗರದ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಜೆಪಿ ಮುಖಂಡ ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ.

ಮೂಲತಃ ಬಳ್ಳಾರಿ ಜಿಲ್ಲೆಯವರಾದ ಅಶೋಕ್ ಗಸ್ತಿ ಅವರು ಸವಿತಾ ಸಮಾಜಕ್ಕೆ ಸೇರಿದ್ದವರು. ಆರ್ ಎಸ್ಎಸ್‍ನ ಶಿಸ್ತಿನ ಸಿಪಾಯಿ ಆಗಿದ್ದ ಗಸ್ತಿ ಅವರನ್ನು ನಾಲ್ಕು ತಿಂಗಳ ಹಿಂದಷ್ಟೇ ರಾಜ್ಯಸಭೆಗೆ ಆಯ್ಕೆ ಮಾಡಲಾಗಿತ್ತು.

ವಿಧಾನಸಭೆಯಿಂದ ರಾಜ್ಯಸಭೆಗೆ ಜೂನ್ 8ರಂದು ನಡೆಯಬೇಕಿದ್ದ ಚುನಾವಣೆಗೆ ಬಿಜೆಪಿ ಸಾಮಾನ್ಯ ಕಾರ್ಯಕರ್ತರಾಗಿದ್ದ ಅಶೋಕ್ ಗಸ್ತಿ ಅವರನ್ನು ಕಣಕ್ಕಿಳಿಸಿತ್ತು ಮತ್ತು ಅವಿರೋಧವಾಗಿ ಆಯ್ಕೆಯಾಗಿದ್ದರು.

No Comments

Leave A Comment