Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಮು೦ಬರುವ ಮಾಗ ಮಾಸದಲ್ಲಿ ಭಜನಾ ಸಪ್ತಾಹ ಕಾರ್ಯಕ್ರಮವು ಜರಗಲಿದೆ.....ವರ್ಷ೦ಪ್ರತಿ ನವರಾತ್ರೆಯ೦ದು ನಡೆಯಲಿರುವ ಶ್ರೀಶಾರದಾ ಪೂಜಾ ಕಾರ್ಯಕ್ರಮವು ವಿಜೃ೦ಭಣೆಯಲ್ಲಿ ಜರಗಲಿದೆ....

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ಆಯಾಮ ನೀಡುವುದು ಸರ್ಕಾರದ ಗುರಿ: ಸಿಎಂ ಯಡಿಯೂರಪ್ಪ

ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ಆಯಾಮ ನೀಡುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಲ್ಲಿ ಒಂದಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹಿಂದಿನಂತೆಯೇ ಈ ಭಾರಿಯೂ ಬಾರೀ ಭರವಸೆಗಳನ್ನು ನೀಡಿದ್ದಾರೆ.

ಹೈದರಾಬಾದ್ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಗುರುವಾರ ಕಲಬುರಗಿಯ ಪೊಲೀಸ್ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ, ಪ್ರಾದೇಶಿಕ ಅಸಮತೋಲನ ನಿವಾರಣೆ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಸ್ಥಾಪಿಸಲಾಗಿದೆ ಎಂದರು.

ಮಾನವ ಸಂಪನ್ಮೂಲ, ಕೃಷಿ, ಸಾಂಸ್ಕೃತಿಕ ಸಂಘವು ನಿಗದಿತ ಗುರಿ ಮುಟ್ಟಿಸಲು ಯಶಸ್ವಿಯಾಗುತ್ತದೆ. ಅದಕ್ಕೆ ಸರ್ಕಾರದ ಸಂಪೂರ್ಣ ಸಹಕಾರವಿದೆ. ಕಲ್ಯಾಣ ಕರ್ನಾಟಕದ ಉತ್ಸವದ ಮಂಗಳ ಘಳಿಗೆಯಲ್ಲಿ ಈ ಭಾಗದ ಅಭಿವೃದ್ದಿಯ ಹೊಸ ಶೆಕೆಗೆ ನಾಂದಿ ಹಾಡಲು ನನಗೆ ಸಂತೋಷವಾಗುತ್ತದೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದ್ದಾರೆ.

ಈ ಭಾಗಕ್ಕೆ ತಡವಾಗಿ ಸ್ವಾತಂತ್ರ್ಯ ಸಿಕ್ಕಿದೆ. ಸರ್ದಾರ್ ಪಟೇಲರ ಪ್ರಯತ್ನದಿಂದಾಗಿ ಭಾರತ ಒಕ್ಕೂಟದಲ್ಲಿ ಈ ಭಾಗ ವಿಲೀನವಾಯಿತು. ಪಟೇಲರ ನಿರ್ಧಾರದಿಂದಾಗಿ ಒಂದು ವರ್ಷ ತಡವಾಗಿ ಈ ಭಾಗ ವಿಲೀನವಾಯಿತು. ಹೈದರಾಬಾದ್ ನಿಜಾಮನ ಶೋಷಣೆಯಿಂದ ಮುಕ್ತಿ ಹೊಂದಿದ ದಿನ ಇದಾಗಿದೆ. ಕಳೆದ ವರ್ಷ ಇದೇ ದಿನ ಹೈದರಾಬಾದ್ ಕರ್ನಾಟಕ ಪ್ರದೇಶವನ್ನು ಕಲ್ಯಾಣ ಕರ್ನಾಟಕ ಎಂದು ಮಾರ್ಪಡಿಸಲಾಗಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ಆಯಾಮ ನೀಡುತ್ತೇವೆ ಎಂದರು.

ಇದೇ ವೇಳೆ ಸಿಎಂ ಯಡಿಯೂರಪ್ಪ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಜಯದೇವ ಹೃದ್ರೋಗ ಸಂಸ್ಥೆ, ಕಲಬುರ್ಗಿ ನಗರಕ್ಕೆ ನಿರಂತರ ನೂರು ಪೂರೈಕೆ ಯೋಜನೆಗೆ ಅಡಿಗಲ್ಲು, ರಸ್ತೆ ಅಗಲೀಕರಣ, ಜೇವರ್ಗಿ ರಸ್ತೆ ರೈಲ್ವೆ ಮೇಲ್ಸೇತುವೆ, ವಸತಿ ನಿಲಯಗಳ ಉದ್ಘಾಟನೆ ಮಾಡಿದರು.

No Comments

Leave A Comment