Log In
BREAKING NEWS >
ಉಡುಪಿಯ ಮತ್ತೊ೦ದು ಕನ್ನಡ ವೆಬ್ ಸೈಟ್ ಸುದ್ದಿಕಿರಣ.ಕಾ೦ ಸೋಮವಾರ(ಇ೦ದು) ಲೋಕಾರ್ಪಣೆ .... ಅ.27ರ ಮ೦ಗಳವಾರದ೦ದು ಶ್ರೀಶಾರದಾ ವಿರ್ಸಜನಾ ಕಾರ್ಯಕ್ರಮವು ಜರಗಲಿದೆ.

ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ರಾಗಿಣಿ, ಸಂಜನಾಗೆ ಇನ್ನೆರಡು ದಿನ ಜೈಲೇ ಗತಿ

ಸ್ಯಾಂಡಲ್ ವುಡ್ ನಲ್ಲಿ ನಶೆಯ ಜಾಲಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಗೆ ಇನ್ನೂ ಎರಡು ದಿನ ಜೈಲೇ ಗತಿಯಾಗಿದೆ.

ನಟಿಯರ ಜಾಮೀನು ಅರ್ಜಿ ವಿಚಾರಣೆಯನ್ನು 33ನೇ ಸೆಷನ್ಸ್ ನ್ಯಾಯಾಲಯ ಎರಡು ದಿನಕ್ಕೆ ಮುಂದೂಡಿದೆ.

ಪ್ರಕರಣಕ್ಕೆ ಸಂಬಂಧಿಸಿ ಆಕ್ಷೇಪಣೆ ಸಲ್ಲಿಕೆಗಾಗಿ  ಪಬ್ಲಿಕ್ ಪ್ರಾಸಿಕ್ಯೂಟರ್​ ಸಮಯ ಕೇಳಿದ್ದ ಹಿನ್ನೆಲೆ ವಿಚಾರಣೆಯನ್ನು ನ್ಯಾಯಾಲಯ ಸೆಪ್ಟೆಂಬರ್ 21ಕ್ಕೆ  ಮುಂದೂಡಿದೆ.

ಇದಲ್ಲದೆ ಪ್ರಕರಣದ ಆರೋಪಿ ನಂ. 1 ಶಿವಪ್ರಕಾಶ್ ಅಲಿಯಾಸ್ ಚಿಪ್ಪಿ ಅವರ ವೊಚಾರಣೆಯೂ ಸಹ ಮುಂದೂಡಿಕೆಯಾಗಿದೆ.’

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಇಂದು ಒಟ್ಟು ಐದು ಆರೋಪಿಗಳ ಜಾಮೀನಿನ ವಿಚಾರಣೆ ಇತ್ತು. ಇದರಲ್ಲಿ ಕೆಲವರು ಜೈಲಿನಲ್ಲಿದ್ದರೆ ಇನ್ನೂ ಕೆಲವರು ಸಿಸಿಬಿ ಕಸ್ಟಡಿಯಲ್ಲಿದ್ದಾರೆ.

No Comments

Leave A Comment