Log In
BREAKING NEWS >
ಉಡುಪಿಯ ಮತ್ತೊ೦ದು ಕನ್ನಡ ವೆಬ್ ಸೈಟ್ ಸುದ್ದಿಕಿರಣ.ಕಾ೦ ಸೋಮವಾರ(ಇ೦ದು) ಲೋಕಾರ್ಪಣೆ .... ಅ.27ರ ಮ೦ಗಳವಾರದ೦ದು ಶ್ರೀಶಾರದಾ ವಿರ್ಸಜನಾ ಕಾರ್ಯಕ್ರಮವು ಜರಗಲಿದೆ.

ಮಂಗಳೂರು: ಕೂಳೂರು ಶಾಲಾ ತಡೆಗೋಡೆ ಕುಸಿದು ಕೂಲಿ ಕಾರ್ಮಿಕ ಮೃತ್ಯು

ಮಂಗಳೂರು: ಕೂಳೂರು ಶಾಲಾ ತಡೆಗೋಡೆ ಕುಸಿದು ಕೂಲಿ ಕಾರ್ಮಿಕ ಮೃತ್ಯುಮೃತರನ್ನು ನೀರುಮಾರ್ಗದ ನಿವಾಸಿ ಉಮೇಶ್ (38) ಎಂದು ಗುರುತಿಸಲಾಗಿದೆ. ಘಟನೆಯ ಸಂಭವಿಸಿದ ಸಂದರ್ಭ ಇವರು ಸ್ಥಳದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಕಳೆದ ಕೆಲವು ದಿನಗಳಿಂದ ನಗರದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಕಾಂಪೌಂಡ್ ಗೋಡೆ ಕುಸಿದಿದೆ.

ಇದ್ದಕ್ಕಿದ್ದಂತೆ ತಡೆಗೋಡೆ ಕುಸಿದ ಪರಿಣಾಮ ಉಮೇಶ್‌ ಅವರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳೀಯರ ಸಹಾಯದಿಂದ ರಕ್ಷಣಾ ಕಾರ್ಯಚರಣೆ ಮಾಡಿದರೂ ಕೂಡಾ ಉಮೇಶ್ ಅವರು ಮೃತಪಟ್ಟಿದ್ದರು.

ಘಟನೆಯ ಬಗ್ಗೆ ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

No Comments

Leave A Comment