Log In
BREAKING NEWS >
ಉಡುಪಿಯ ಮತ್ತೊ೦ದು ಕನ್ನಡ ವೆಬ್ ಸೈಟ್ ಸುದ್ದಿಕಿರಣ.ಕಾ೦ ಸೋಮವಾರ(ಇ೦ದು) ಲೋಕಾರ್ಪಣೆ .... ಅ.27ರ ಮ೦ಗಳವಾರದ೦ದು ಶ್ರೀಶಾರದಾ ವಿರ್ಸಜನಾ ಕಾರ್ಯಕ್ರಮವು ಜರಗಲಿದೆ.

ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಗಂಗಾಧರ ಹಿರೇಗುತ್ತಿ ಆಯ್ಕೆ

ಬ್ರಹ್ಮಾವರ: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪ್ರತಿ ವರ್ಷ ಮುಂಗಾರು ಪತ್ರಿಕೆಯ ಸಂಪಾದಕ ದಿ| ವಡ್ಡರ್ಸೆ ರಘುರಾಮ ಶೆಟ್ಟಿ ಹೆಸರಲ್ಲಿ ಕೊಡಮಾಡುವ ಪತ್ರಿಕೋದ್ಯಮ ಪ್ರಶಸ್ತಿಗೆ ಕರಾವಳಿ ಮುಂಜಾವು ದಿನಪತ್ರಿಕೆಯ ಸಂಪಾದಕ ಗಂಗಾಧರ ಹಿರೇಗುತ್ತಿ ಈ ಬಾರಿ ಆಯ್ಕೆಯಾಗಿದ್ದಾರೆ ಎಂದು ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಬ್ರಹ್ಮಾವರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪತ್ರಿಕಾ ವಿತರಕರಾಗಿ ವೃತ್ತಿ ಜೀವನವನ್ನು ಆರಂಭಿಸಿದ ಗಂಗಾಧರ ಹಿರೇಗುತ್ತಿಯವರು ಪತ್ರಿಕೋದ್ಯಮದ ಕುರಿತು ಬಾಲ್ಯದಲ್ಲೇ ಹಲವು ಕನಸುಗಳನ್ನು ಕಂಡಿದ್ದರು. ಅನಂತರ ‘ಮುಂಗಾರು’ ದಿನಪತ್ರಿಕೆಯಲ್ಲಿ ಉತ್ತರ ಕನ್ನಡದ ವರದಿಗಾರನಾಗಿ 10ವರ್ಷ ಸೇವೆ ಸಲ್ಲಿಸಿ, ಅನಂತರ ಕಾರವಾರದ ಜಿಲ್ಲಾ ಕೇಂದ್ರದಿಂದ ‘ಕರಾವಳಿ ಮುಂಜಾವು’ ದಿನಪತ್ರಿಕೆ ಆರಂಭಿಸಿದ್ದು ಪ್ರಸ್ತುತ ಈ ಪತ್ರಿಕೆ ರಾಜ್ಯದ ಪ್ರಸಿದ್ಧ ದಿನಪತ್ರಿಕೆಗಳ ಸಾಲಿನಲ್ಲಿ ಗುರುತಿಸಿಕೊಂಡಿದೆ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಅತ್ಯುನ್ನತ ಸಾಧನೆಗಾಗಿ ಹಿರೇಗುತ್ತಿಯವರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ, ಸಾಧನ ರಾಷ್ಟ್ರೀಯ ಪ್ರಶಸ್ತಿಗಳು ಸಂದಿದೆ. ವಡ್ಡರ್ಸೆಯವರ ಪತ್ರಿಕೋದ್ಯಮದ ಆದರ್ಶ ಮತ್ತು ಸಮಾಜವಾದಿ ನಿಲುವನ್ನು ಮೈಗೂಡಿಸಿಕೊಂಡ ಹಿರೇಗುತ್ತಿಯವರಿಗೆ ಈ ಪ್ರಶಸ್ತಿ ನೀಡಿ ಗೌರವಿಸುವುದು ಹೆಮ್ಮೆಯ ವಿಚಾರ ಎಂದರು.

ಅ.11ರಂದು ಅಪರಾಹ್ನ 4.30ಕ್ಕೆ ಬ್ರಹ್ಮಾವರದ ಬಂಟರ ಭವನದಲ್ಲಿ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದ್ದು , ಖ್ಯಾತ ಸಾಹಿತಿ ಅಂಬಾತನಯ ಮುದ್ರಾಡಿ ಪ್ರಶಸ್ತಿ ಪ್ರದಾನಗೈಯಲಿದ್ದಾರೆ ಹಾಗೂ ಜಿಲ್ಲೆಯ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿರುವವರು ಎಂದು ತಿಳಿಸಿದ್ದಾರೆ.

No Comments

Leave A Comment