Log In
BREAKING NEWS >
ಉಡುಪಿಯ ಮತ್ತೊ೦ದು ಕನ್ನಡ ವೆಬ್ ಸೈಟ್ ಸುದ್ದಿಕಿರಣ.ಕಾ೦ ಸೋಮವಾರ(ಇ೦ದು) ಲೋಕಾರ್ಪಣೆ .... ಅ.27ರ ಮ೦ಗಳವಾರದ೦ದು ಶ್ರೀಶಾರದಾ ವಿರ್ಸಜನಾ ಕಾರ್ಯಕ್ರಮವು ಜರಗಲಿದೆ.

ಮಹಾರಾಷ್ಟ್ರದ ಭಿವಾಂಡಿಯಲ್ಲಿ ಬಹುಮಹಡಿ ಕಟ್ಟಡ ಕುಸಿತ; ಕನಿಷ್ಠ 10 ಮಂದಿ ಸಾವು, 25 ಮಂದಿ ಸಿಲುಕಿರುವ ಶಂಕೆ

ಮುಂಬೈ: ಮಹಾರಾಷ್ಟ್ರದ ಭಿವಾಂಡಿಯಲ್ಲಿ ಬಹುಮಹಡಿ ಕಟ್ಟಡವೊಂದು ಕುಸಿದಿದ್ದು ಪರಿಣಾಮ ಕಟ್ಟಡೊಳಗಿದ್ದವರ ಪೈಕಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ವಾಣಿಜ್ಯ ನಗರಿ ಮುಂಬೈ ಸಮೀಪದಲ್ಲೇ ಇರುವ ಥಾಣೆ ಜಿಲ್ಲೆಯ ಭಿವಾಂಡಿಯಲ್ಲಿರುವ ಪಟೇಲ್ ಕಾಂಪೌಂಡ್ ಪ್ರದೇಶದಲ್ಲಿ ಮೂರು ಮಹಡಿ ಕಟ್ಟದ ಕುಸಿದುಬಿದ್ದು 10 ಮಂದಿ ಮೃತಪಟ್ಟಿದ್ದಾರೆ. ಇಂದು ಮುಂಜಾನೆ ಸುಮಾರು 3.30ರ ಹೊತ್ತಿನಲ್ಲಿ ಈ ಘಟನೆ ನಡೆದಿದ್ದು, 25ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ  ಶಂಕೆಯಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಸಿಬ್ಬಂದಿ ಸ್ಥಳಕ್ಕೆ ಧೌಡಾಯಿಸಿದ್ದು, ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸುವ ಕಾರ್ಯಾಚರಣೆ ಮಾಡುತ್ತಿದ್ದಾರೆ.  ಈ ಬಗ್ಗೆ ಮಾಹಿತಿ ನೀಡಿರುವ ಥಾಣೆ ಮುನ್ಸಿಪಲ್ ಕಾರ್ಪೋರೇಷನ್ ವಕ್ತಾರರು ರಕ್ಷಣಾ ಕಾರ್ಯಾಚರಣೆ ಸಾಗಿದ್ದು, ಈ ವರೆಗೂ 10 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಅಂತೆಯೇ ಅವಶೇಷಗಳಡಿಯಲ್ಲಿ ಸಿಲುಕಿದ್ದ 5 ಮಂದಿಯನ್ನು ರಕ್ಷಿಸಲಾಗಿದೆ. ಇನ್ನೂ 20 ಮಂದಿ ಸಿಲುಕಿರುವ ಸಾಧ್ಯತೆ ಇದ್ದು ಕಾರ್ಯಾಚರಣೆ ಸಾಗಿದೆ ಎಂದು ಮಾಹಿತಿ ನೀಡಿದ್ದಾರೆ.

No Comments

Leave A Comment