Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಅಕ್ಟೋಬರ್ 26ರ೦ದು ಚ೦ಡಿಕಾ ಹೋಮ ನಡೆಯಲಿದೆ. ಅ.27ರ ಮ೦ಗಳವಾರದ೦ದು ಶ್ರೀಶಾರದಾ ವಿರ್ಸಜನಾ ಕಾರ್ಯಕ್ರಮವು ಜರಗಲಿದೆ.

ಐಪಿಎಲ್ ಬೆಟ್ಟಿಂಗ್ ದಂಧೆ: ಸಿಸಿಬಿ ಪೊಲೀಸರಿಂದ 6 ಮಂದಿ ಬಂಧನ, 6 ಲಕ್ಷ ರೂ. ವಶ

ಬೆಂಗಳೂರು: ಐಪಿಎಲ್-2020 ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳ ಮೇಲೆ ಸಿಸಿಬಿ ಪೊಲೀಸರು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಆರು ಮಂದಿಯನ್ನು ಬಂಧಿಸಿದ್ದಾರೆ.

ಐಪಿಎಲ್ ಪಂದ್ಯದ ಹೆಸರಿನಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದಾರೆ ಎಂದು ಖಚಿತ ಮಾಹಿತಿ ಪಡೆದ ಪೊಲೀಸರು ಬಾಣಸವಾಡಿ ಮತ್ತು ಮಲ್ಲೇಶ್ವರಂನಲ್ಲಿ ಆರು ಮಂದಿಯನ್ನು ಬಂಧಿಸಿ ಅವರ ಬಳಿಯಿಂದ 6 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಎರಡು ಕೇಸುಗಳು ದಾಖಲಾಗಿದೆ ಎಂದು ನಗರ ಅಪರಾಧ ದಳದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

No Comments

Leave A Comment