Log In
BREAKING NEWS >
ಉಡುಪಿಯ ಮತ್ತೊ೦ದು ಕನ್ನಡ ವೆಬ್ ಸೈಟ್ ಸುದ್ದಿಕಿರಣ.ಕಾ೦ ಸೋಮವಾರ(ಇ೦ದು) ಲೋಕಾರ್ಪಣೆ .... ಅ.27ರ ಮ೦ಗಳವಾರದ೦ದು ಶ್ರೀಶಾರದಾ ವಿರ್ಸಜನಾ ಕಾರ್ಯಕ್ರಮವು ಜರಗಲಿದೆ.

ಐಪಿಎಲ್ 2020: ಕೆಕೆಆರ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 49 ರನ್ ಗಳ ಭರ್ಜರಿ ಗೆಲುವು

ಅಬುದಾಬಿ: ಇಲ್ಲಿನ ಶೇಖ್ ಝಾಯೆದ್ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್ 13 ಆವೃತ್ತಿಯ ಪಂದ್ಯದಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ 49 ರನ್ ಗಳಿಂದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸಿದೆ.

ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಮುಂಬೈ ಇಂಡಿಯನ್ಸ್  ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿ ಎದುರಾಳಿಗೆ 196ರನ್ ಗಳ  ಟಾರ್ಗೆಟ್ ನೀಡಿತು.

ನಾಯಕ ರೋಹಿತ್ ಶರ್ಮಾ 54 ಎಸೆತಗಳಲ್ಲಿ 6 ಸಿಕ್ಸರ್ ಸೇರಿದಂತೆ 80 ರನ್ ಸಿಡಿಸಿ ತಂಡದ ಮೊತ್ತ ಹೆಚ್ಚಾಗಲು ನೆರವಾದರು.  ಸೂರ್ಯ ಕುಮಾರ್ ಯಾದವ್ 47 ರನ್ ಕಲೆಹಾಕಿದರು. ಕೆಕೆಆರ್ ಪರ ಬೌಲಿಂಗ್ ದಾಳಿ ನಡೆಸಿದ ವೇಗಿ ಶಿವಂ, ಮಾವಿ 32ಕ್ಕೆ 2 ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿಕೊಂಡರು.

ಮುಂಬೈ ಇಂಡಿಯನ್ಸ್ ನೀಡಿದ 196 ರನ್ ಗಳ ಬೃಹತ್ ಗುರಿ ಬೆನ್ನತ್ತಿದ್ದ ಕೆಕೆಆರ್ 9 ವಿಕೆಟ್ ನಷ್ಟಕ್ಕೆ 146 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರಿಂದಾಗಿ ಮುಂಬೈ ಇಂಡಿಯನ್ಸ್ ಗೆಲುವಿನ ನಗೆ ಬೀರಿತು.

No Comments

Leave A Comment