Log In
BREAKING NEWS >
ಉಡುಪಿ ಶ್ರೀಕೃಷ್ಣಾಪುರ ಮಠಾಧೀಶರ 4ನೇ ಪರ್ಯಾಯಕ್ಕೆ ಅದ್ದೂರಿಯ ಬಾಳೆ ಮುಹೂರ್ತ.........ರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಬುದ್ಗಾಮ್’ನಲ್ಲಿ ಉಗ್ರರ ದಾಳಿ: ಓರ್ವ ಸಿಆರ್’ಪಿಎಫ್ ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಛದೂರಾ ಎಂಬ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಸಿಆರ್’ಪಿಎಫ್ ಯೋಧ ಹುತಾತ್ಮರಾಗಿದ್ದಾರೆಂದು ಗುರುವಾರ ತಿಳಿದುಬಂದಿದೆ.

ಛದೂರಾ ಎಂಬ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಸಿಆರ್’ಪಿಎಫ್ ಪಡೆಯ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಘಟನೆಯಲ್ಲಿ ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಗಾಯಗೊಂಡಿದ್ದ ಯೋಧನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಯೋಧ ಹುತಾತ್ಮರಾಗಿದ್ದಾರೆಂದು ವರದಿಗಳು ತಿಳಿಸಿವೆ.

ತಲೆಮರೆಸಿಕೊಂಡಿರುವ ಉಗ್ರರಿಗಾಗಿ ಇದೀಗ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ ಎಂದು ವರದಿಗಳು ತಿಳಿಸಿವೆ.

No Comments

Leave A Comment