ತೀರ್ಥಹಳ್ಳಿ ಸಮೀಪ ಕುಸಿದ ಸೇತುವೆ: ಶಿವಮೊಗ್ಗ- ಉಡುಪಿ ನಡುವಿನ ಸಂಚಾರ ಸಂಪುರ್ಣ ಬಂದ್
ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಸಮೀಪದ ರಂಜದಕಟ್ಟೆಯಲ್ಲಿ ಸೇತುವೆಯೊಂದು ಕುಸಿತವಾಗಿದ್ದು, ಇದರಿಂದ ಶಿವಮೊಗ್ಗ – ಉಡುಪಿ ನಡುವಿನ ಸಂಚಾರ ಸಂಪುರ್ಣ ಬಂದ್ ಆಗಿದೆ.
ರಂಜದಕಟ್ಟೆಯಲ್ಲಿರುವ ಬಿಂತದ ಹಳ್ಳಕ್ಕೆನಿರ್ಮಿಸಿರುವ ಸೇತುವೆ ಕುಸಿತವಾಗಿದೆ. ಈ ಬಾರಿಯ ಸುರಿದ ಭಾರಿ ಮಳೆ ಹಾಗೂ ಭಾರಿ ವಾಹನಗಳ ಸಂಚಾರದಿಂದ ಸೇತುವೆ ಕುಸಿದಿದೆ ಎನ್ನಲಾಗಿದೆ.
ಈ ಸೇತುವೆ ಮೂಲಕ ಹಲವು ಪ್ರದೇಶಗಳ ಜನರ ಓಡಾಟ ನಡೆಯುತ್ತಿತ್ತು. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಇದೇ ಮಾರ್ಗವಾಗಿ ಪ್ರತಿದಿನ ನೂರಾರು ರೋಗಿಗಳು ಉಡುಪಿ, ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳುತ್ತಿದ್ದರು. ಆದರೆ ಇದೀಗ ಸೇತುವೆ ಕುಸಿತದಿಂದ ಆ್ಯಂಬುಲೆನ್ಸ್ ಸೇರಿದಂತೆ ಹಲವಾರು ವಾಹನಗಳು ಹರಸಾಹಸ ಪಡಬೇಕಾಗಿದೆ.
ತೀರ್ಥಹಳ್ಳಿ ಹೆದ್ದಾರಿ ಬದಲಿ ಮಾರ್ಗಗಳು
1. ಉಡುಪಿ, ಆಗುಂಬೆ, ಸಾಗರ, ಶಿವಮೊಗ್ಗ ಹೋಗುವವರು ತೀರ್ಥಹಳ್ಳಿ ಮಾರ್ಗದಲ್ಲಿ ಕಲ್ಮನೆ, ಉಂಟೂರುಕಟ್ಟೆ ಕೈಮರ ನಂತರ ಸಿಗುವ ಬಿಳುಕೊಪ್ಪ ಇಲ್ಲಿ ಶಾಲಾ ಸಮೀಪ ಇರುವ ರಸ್ತೆಯಲ್ಲಿ ಸಾತ್ಗೋಡು (7 KM) ಸಂಚರಿಸಿ ಅಲ್ಲಿಂದ ಬಲಭಾಗದಿಂದ ಮುಕ್ತಿಹರಿಹರಪುರ, ಬೊಬ್ಬಿ ಮಾರ್ಗವಾಗಿ ತೀರ್ಥಹಳ್ಳಿ ಮಾರ್ಗ ಸಂಪರ್ಕಿಸಬಹುದು.
2. ಆಗುಂಬೆ, ಕಮ್ಮರಡಿ, ರಾಮಕೃಷ್ಣಪುರ, ದೇವಂಗಿ, ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸಬಹುದು.