Log In
BREAKING NEWS >
ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಕುಮಟಾದಲ್ಲಿ ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ಅನಿಲ ಸೋರಿಕೆ

ಕುಮಟಾ:ಸೆಪ್ಟೆಂಬರ್, 26. ತುಂಬಿದ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾಗಿರುವ ಘಟನೆ ಇಂದು ರಾಷ್ಟ್ರೀಯ ಹೆದ್ದಾರಿ ಹಂದಿಗೋಣ ಗ್ರಾಮದ ಬಳಿ ನಡೆದಿದ್ದು, ಇದರಿಂದಾಗಿ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ.

ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಟ್ಯಾಂಕರ್ ನಿಂದ ಸಣ್ಣ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗುತ್ತಿದೆ. ಹೀಗಾಗಿ ಯಾರನ್ನೂ ಸಮೀಪ ಬಿಡುತ್ತಿಲ್ಲ. ಇದರೊಂದಿಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಕಾರಣ ಹೆದ್ದಾರಿಯಲ್ಲಿ ವಾಹನಗಳು ಸಂಚರಿಸಲಾಗುತ್ತಿಲ್ಲ.

ಟ್ಯಾಂಕರ್ ಬಿದ್ದ ಸ್ಥಳದಿಂದ ಎರಡೂ ಕಡೆ ಅರ್ಧ ಕಿಲೋ ಮೀಟರ್ ದೂರದಲ್ಲಿ ವಾಹನಗಳನ್ನು ತಡೆ ಹಿಡಿಯಲಾಗಿದೆ. ಇದರಿಂದ ಸುಮಾರು 4 ಕಿ.ಮೀ ದೂರದವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ.

ಮುಂಜಾಗ್ರತಾ ಕ್ರಮವಾಗಿ ಸಮೀಪದ ಮನೆಗಳಲ್ಲಿ ವಿದ್ಯುತ್ ಉಪಕರಣಗಳನ್ನು ಬಳಸದಂತೆ ಹಾಗೂ ಬೆಂಕಿ ಹಚ್ಚದಂತೆ ಪೊಲೀಸರು ಧ್ವನಿವರ್ಧಕದ ಮೂಲಕ ಜನರಿಗೆ ಎಚ್ಚರಿಕೆ ನೀಡುತ್ತಿದ್ದಾರೆ.ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳದ ಅಧಿಕಾರಿಗಳು ಭೇಟಿ ನೀಡಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

No Comments

Leave A Comment