Log In
BREAKING NEWS >
ಉಡುಪಿಯ ಮತ್ತೊ೦ದು ಕನ್ನಡ ವೆಬ್ ಸೈಟ್ ಸುದ್ದಿಕಿರಣ.ಕಾ೦ ಸೋಮವಾರ(ಇ೦ದು) ಲೋಕಾರ್ಪಣೆ .... ಅ.27ರ ಮ೦ಗಳವಾರದ೦ದು ಶ್ರೀಶಾರದಾ ವಿರ್ಸಜನಾ ಕಾರ್ಯಕ್ರಮವು ಜರಗಲಿದೆ.

ಮೈಸೂರು ಪೊಲೀಸರ ತ್ವರಿತ ಕಾರ್ಯಾಚರಣೆ: ನಾಲ್ವರು ಅಂತಾರಾಜ್ಯ ಗಾಂಜಾ ಸಾಗಣೆದಾರರ ಬಂಧನ

ಮೈಸೂರು: ಮೈಸೂರು ಜಿಲ್ಲಾ ಪೊಲೀಸರು ಇಂದು ತ್ವರಿತ ಕಾರ್ಯಾಚರಣೆ ನಡೆಸಿ, ನಾಲ್ವರು ಅಂತರಾಜ್ಯ ಗಾಂಜಾ ಸಾಗಣೆದಾರರನ್ನು ಬಂಧಿಸಿದ್ದಾರೆ.

ಕೇರಳ ಮೂಲದ ಮಹಮ್ಮದ್ ಶಫಿ, ಸಲೀಂ, ಪಫೀ, ಇಬ್ರಾಹಿಂ ಕುಟ್ಟಿ ಬಂಧಿತ ಆರೋಪಿಗಳು ಎಂದು ಮಾಹಿತಿ ತಿಳಿದು ಬಂದಿದೆ. ಈ ಕುರಿತು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಿ ರಿಷ್ಯಂತ್ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ.

ಆರೋಪಿಗಳು ಆಂಧ್ರಪ್ರದೇಶದಿಂದ ಕರ್ನಾಟಕದ ಮೂಲಕ ಗೂಡ್ಸ್ ಆಟೋದಲ್ಲಿ ಟೊಮೊಟೊ ಹಣ್ಣಿನ ಕ್ರೇಟ್ ಗಳ ನಡುವೆ ಗಾಂಜಾ ಇಟ್ಟು ಕೇರಳ ರಾಜ್ಯಕ್ಕೆ ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಮೈಸೂರು ಜಿಲ್ಲಾ ಪೊಲೀಸರು‌ ನಾಲ್ವರನ್ನು ಬಂಧಿಸಿ, 86 ಕೆಜಿ 300 ಗ್ರಾಂ ಗಾಂಜಾ ಹಾಗೂ ಗಾಂಜಾ ಸಾಗಿಸುತ್ತಿದ್ದ ವಾಹನ ವಶಕ್ಕೆ ಪಡೆದಿದ್ದಾರೆ.

ಮೈಸೂರು ನಂಜನಗೂಡು ಹೆದ್ದಾರಿಯಲ್ಲಿರುವ ಏರ್ ಪೋರ್ಟ್ ಬಳಿ ಪೋಲೀಸರು ಬೀಸಿದ ಬಲೆಗೆ ಆರೋಪಿಗಳು ಬಿದ್ದಿದ್ದಾರೆ. ಈ ಸಂಬಂಧ ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment