Log In
BREAKING NEWS >
ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ನೀರು ಕುಡಿಯಲು ಕೆರೆಗಿಳಿದ 2 ಆನೆಗಳಿಗೆ ವಿದ್ಯುತ್ ಶಾಕ್ ಹೊಡೆದು ಸಾವು: ಬನ್ನೇರುಘಟ್ಟ ಉದ್ಯಾನದಲ್ಲಿ ಘಟನೆ

ಕನಕಪುರ: ನೀರು ಕುಡಿಯಲು ಕೆರೆಗಿಳಿದ ಎರಡು ಆನೆಗಳು ವಿದ್ಯುತ್ ಸ್ಪರ್ಶದಿಂದಾಗಿ ಸಾವನ್ನಪ್ಪಿರುವ ಧಾರುಣ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

35ರಿಂದ 40 ವರ್ಷ ವಯಸ್ಸಿನ ಹೆಣ್ಣಾನೆ. 15 ರಿಂದ 16 ವರ್ಷ ವಯಸ್ಸಿನ ಮರಿ ಆನೆ ಸಾವನ್ನಪ್ಪಿದೆ. ಕೋಡಿಹಳ್ಳಿ ವಲಯ ಬನ್ನೈರುಘಟ್ಟ ರಾಷ್ಟ್ರೀಯ ಅಭಯಾರಣ್ಯ ಪ್ರದೇಶದ ಚಿಕ್ಕಗೊಂಡನಹಳ್ಳಿ ಬಳಿಯಿರುವ ಹೊಸಕೆರೆಗೆ ಶುಕ್ರವಾರ ಸಂಜೆ ಸುಮಾರು 8ರಿಂದ 10 ಆನೆಗಳ ಹಿಂಡು ನೀರು ಕುಡಿಯಲು ಬಂದಿವೆ.

ಅದರಲ್ಲಿ ಎರಡು ಆನೆಗಳು ಕೆರೆಯ ಮಧ್ಯಭಾಗಕ್ಕೆ ತೆರಳಿವೆ. ಕೆರೆಯ ಮಧ್ಯದಲ್ಲಿ ಹಾದುಹೋಗಿರುವ ವಿದ್ಯುತ್ ತಂತಿ ತಗುಲಿದ ಪರಿಣಾಮ ಎರಡೂ ಆನೆಗಳು ಸ್ಥಳದಲ್ಲಿಯೇ ಸಾವನ್ನಪ್ಪಿವೆ. ಶನಿವಾರ ಮಧ್ಯಾಹ್ನ ಘಟನೆ ಬೆಳಕಿಗೆ ಬಂದಿದೆ.

ಘಟನೆ ಕುರಿತು ಸುದ್ದಿ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

No Comments

Leave A Comment