Log In
BREAKING NEWS >
ಮಾ.5ರ೦ದು ಬೆಳಿಗ್ಗೆ 8ಗ೦ಟೆಗೆ ಪಣಿಯಾಡಿ ಶ್ರೀಅನ೦ತಪದ್ಮನಾಭ ದೇವಳದ ಗರ್ಭಗುಡಿಯ ಮಹಾದ್ವಾರದ ಹೊಸ್ತಿಲು ಸ್ಥಾಪನೆ ಕಾರ್ಯಕ್ರಮ ಜರಗಲಿದೆ....

ದಿವಂಗತ ಐಎಎಸ್​ ಅಧಿಕಾರಿ ಡಿಕೆ ರವಿ ಪತ್ನಿ ಎಚ್. ಕುಸುಮಾ ಕಾಂಗ್ರೆಸ್ ಗೆ ಸೇರ್ಪಡೆ

ಬೆಂಗಳೂರು: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ದಿವಂಗತ ಐಎಎಸ್​ ಅಧಿಕಾರಿ ಡಿ.ಕೆ ರವಿ ಅವರ ಪತ್ನಿ ಎಚ್. ಕುಸುಮಾ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕುಸುಮಾ ಅವರು ತಂದೆ ಹನುಮಂತರಾಯಪ್ಪ ಅವರೊಡನೆ ಕೆಪಿಸಿಸಿ ಕಚೇರಿಗೆ ಆಗಮಿಸಿದಾಗ ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಆದರದಿಂದ ಬರಮಾಡಿಕೊಂಡರು.  ಬಳಿಕ ಕುಸುಮಾ ಅವರು ತಾವು ಪಕ್ಷಕ್ಕೆ ಸೇರ್ಪಡೆಯಾಗಿರುವ ಸಂಬಂಧ ಸದಸ್ಯತ್ವ ಅರ್ಜಿಯನ್ನು ಪಕ್ಷದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ನಿಡೀದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಜಿ. ಪರಮೇಶ್ವರಿನ್ನೂ ಮೊದಲಾದ ನಾಯಕರು ಈ ಸಂದರ್ಭ ಹಾಜರಿದ್ದರು.

ಸಧ್ಯದಲ್ಲೇ ಬೆಂಗಳೂರು ರಾಜರಾಜೇಶ್ವರಿ ನಗರ ಹಾಗೂ ತುಮಕೂರಿನ ಶಿರಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿರುವ ಹಿನ್ನೆಲೆ ಡಿಕೆ ರವಿ ಅವರ ಪತ್ನಿ ಕುಸುಮಾ ಅವರ ಕಾಂಗ್ರೆಸ್ ಸೇರ್ಪಡೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

No Comments

Leave A Comment