ಶ್ರೀನಗರದಲ್ಲಿ ಉಗ್ರರ ದಾಳಿ: ಇಬ್ಬರು ಸಿಆರ್ಪಿಎಫ್ ಯೋಧರು ಹುತಾತ್ಮ, ಮೂವರಿಗೆ ಗಾಯ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಗಾಮ್ ನಲ್ಲಿ ಸೋಮವಾರ ಮಧ್ಯಾಹ್ನ ಭದ್ರತಾ ಪಡೆಗಳ ಗಸ್ತು ತಂಡದ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದು, ಇತರ ಮೂವರು ಗಾಯಗೊಂಡಿದ್ದಾರೆ. ಶ್ರೀನಗರದ ನೌಗಾಮ್ ಪ್ರದೇಶದ ಕಂಡಿಜಾಲ್ ಸೇತುವೆ ಮೇಲೆ ಗಸ್ತು ತಿರುಗುತ್ತಿದ್ದ ತಂಡದ ಮೇಲೆ ಉಗ್ರರು ಮನಸೋಚ್ಛೆ ಗುಂಡು ಹಾರಿಸಿದ್ದಾರೆ. ಭದ್ರತಾ ಪಡೆಗಳು ಸಹ ತಕ್ಕ ಪ್ರತ್ಯುತ್ತರ ನೀಡಿದ್ದು, ಈ ವೇಳೆ ಪರಸ್ಪರ ಗುಂಡಿನ ಚಕಮಕಿ ನಡೆದಿದೆ. ಘರ್ಷಣೆಯಲ್ಲಿ ಐವರು ಸಿಆರ್ ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ಇಬ್ಬರು ಯೋಧರು ಮೃತಪಟ್ಟಿದ್ದಾರೆ ಎಂದು ಎಂದು ಸಿಆರ್ಪಿಎಫ್ ನ ಹಿರಿಯ ಅಧಿಕಾರಿಯೊಬ್ಬರು ಯುಎನ್ಐಗೆ ತಿಳಿಸಿದ್ದಾರೆ. ಹೆಚ್ಚುವರಿ ಭದ್ರತಾ ಪಡೆಗಳನ್ನು ಘಟನಾ ಸ್ಥಳಕ್ಕೆ ತಕ್ಷಣವೇ ನಿಯೋಜಿಸಲಾಗಿದ್ದು, ಇಡೀ ಪ್ರದೇಶವನ್ನು ಸುತ್ತುವರಿಯಲಾಗಿದೆ. ಅಲ್ಲದೆ ತೀವ್ರ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ. Share this:TweetWhatsAppEmailPrintTelegram