Log In
BREAKING NEWS >
ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಬಂಟ್ವಾಳ ಕಳ್ಳರ ಕೈಚಳಕ: ಮನೆಯವರು ಮಲಗಿದ್ದ ವೇಳೆ 12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಬಂಟ್ವಾಳ: ಕಲ್ಲಡ್ಕ ಕರಿಂಗಾನ ಸಮೀಪದ ಅಮ್ಟೂರು ಮಸೀದಿ ಬಳಿಯ ಮನೆಯಲ್ಲಿ ಮನೆ ಮಂದಿ ಮಲಗಿದ್ದ ವೇಳೆ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ ಕಳ್ಳರು ಕೋಣೆಯಲ್ಲಿದ್ದ ಕಪಾಟಿನ ಕೀ ತೆರೆದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಅಮ್ಟೂರು ನಿವಾಸಿ ಸುಲೈಮಾನ್ ಅವರ ಮನೆಯಲ್ಲಿ ಸುಮಾರು 12 ಲಕ್ಷ ಮೌಲ್ಯದ 28 ಪವನ್ ಚಿನ್ನಾಭರಣಗಳು ಕಳವು ನಡೆದಿದೆ. ಸುಲೈಮಾನ್ ಅವರ ಮಗಳು ಮಿಶ್ರಿಯಾ ಅವರಿಗೆ ಸೇರಿದ ಚಿನ್ನಾಭರಣಗಳನ್ನು ಕಳವು ನಡೆಸಿದ್ದಾರೆ.

ಬಂಟ್ವಾಳ ನಗರ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪಿಎಸ್ಐ ಅವಿನಾಶ್, ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

No Comments

Leave A Comment