Log In
BREAKING NEWS >
ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ಸನ್ನಿಧಿಯಲ್ಲಿ ಭಕ್ತರಿ೦ದ ಸಮೂಹಿಕ ಶ್ರಮದಾನ...

ಉತ್ತರ ಪ್ರದೇಶದ ಫತೇಪುರದಲ್ಲಿ 20 ವರ್ಷದ ದಲಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಫತೇಪುರ: ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಮಾಸುವ ಮುನ್ನವೇ ಉತ್ತರ ಪ್ರದೇಶದಲ್ಲಿ ಮತ್ತೊಬ್ಬ ದಲಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಮಹಿಳೆಯರು ಭಯಭೀತರಾಗಿದ್ದಾರೆ.

ಫತೇಪುರದ ಲಿಲೌಲಿ ಪ್ರದೇಶದ ಹಳ್ಳಿಯಲ್ಲಿ ದಲಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.

20 ವರ್ಷದ ಯುವತಿಯೊಬ್ಬಳು ಗುರುವಾರ ಸಂಜೆ ಲಿಲೌಲಿ ಪ್ರದೇಶದ ಹಳ್ಳಿಯೊಂದರಲ್ಲಿ ಬಹಿರ್ದೇಸೆ ಹೋಗಿ ಮನೆಗೆ ಹಿಂದಿರುಗುತ್ತಿದ್ದಾಗ ಇಬ್ಬರು ಕಾಮುಕರು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ತಿಳಿಸಿದ್ದಾರೆ.

ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಆರೋಪಿಗಳಾದ ಅಮನ್ ಯಾದವ್(25) ಮತ್ತು ಗುಡ್ಡು ಯಾದವ್ (24) ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಅವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ ಎಂದ ಅವರು ತಿಳಿಸಿದ್ದಾರೆ.

No Comments

Leave A Comment