Log In
BREAKING NEWS >
ಉಡುಪಿ ಶ್ರೀಕೃಷ್ಣಾಪುರ ಮಠಾಧೀಶರ 4ನೇ ಪರ್ಯಾಯಕ್ಕೆ ಅದ್ದೂರಿಯ ಬಾಳೆ ಮುಹೂರ್ತ.........ರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಡ್ರಗ್ಸ್ ಪ್ರಕರಣ: ನಟಿ ರಾಗಿಣಿ, ಸಂಜನಾ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಯವರ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಯಾಗಿದೆ.

ಇಬ್ಬರೂ ನಟಿಯರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 23ರವರೆಗೆ ವಿಸ್ತರಿಸಿ ಡಿಪಿಎಸ್ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಈ ಆದೇಶದೊಂದಿಗೆ ಇಬ್ಬರೂ ನಟಿಯರು 23ರವರೆಗೂ ಜೈಲುಶಿಕ್ಷೆ ಅನುಭವಿಸುವುದು ಖಾಯಂ ಆಗಿದೆ.

ನಾಳೆ ಜೈಲಿನಲ್ಲೇ ಸಂಜನಾ ಜನ್ಮದಿನ

ಡ್ರಗ್ಸ್ ಪ್ರಕರಣದಲ್ಲಿ ಜೈಲುಹಕ್ಕಿಯಾಗಿರುವ ಸಂಜನಾ ಗಲ್ರಾನಿ, ಅಲ್ಲಿಂದ ಹೊರಬರಲು ನಡೆಸುತ್ತಿರುವ ಪ್ರಯತ್ನ ಇನ್ನೂ ಫಲ ಕೊಟ್ಟಿಲ್ಲ.

ಏತನ್ಮಧ್ಯೆ ಅಕ್ಟೋಬರ್ 10 ರಂದು ಶನಿವಾರ ಆಕೆಯ ಹುಟ್ಟುಹಬ್ಬವಿದ್ದು, ಸಲ ಕೃಷ್ಣನ ಜನ್ಮಸ್ಥಾನದಲ್ಲೇ ಹುಟ್ಟುಹಬ್ಬವನ್ನು ಆಚರಿಸುವ ಸ್ಥಿತಿ ಎದುರಾಗಿದೆ.

No Comments

Leave A Comment