Log In
BREAKING NEWS >
ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ವಿದ್ಯಾಗಮ ಯೋಜನೆ ತಾತ್ಕಾಲಿಕ ಸ್ಥಗಿತ: ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ  ಜಾರಿಗೆ  ತಂದಿರುವ ವಿದ್ಯಾಗಮ  ಕಾರ್ಯಕ್ರಮದ ಕುರಿತು  ಕೆಲವು ವಲಯಗಳಲ್ಲಿ  ಅಭಿಪ್ರಾಯಗಳು ವ್ಯಕ್ತವಾಗಿರುವುದರಿಂದ ವಿದ್ಯಾಗಮ‌ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ  ನಿರ್ದೇಶನ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ವಿದ್ಯಾಗಮ ಸಮಾಜದ  ಕೆಳಸ್ಥರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ  ಮಕ್ಕಳ  ಹಿತವನ್ನು  ಮನದಲ್ಲಿ  ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮ. ಆದರೂ ವಿವಿಧ ವಲಯಗಳಿಂದ  ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು  ಸಂಗ್ರಹಿಸಲು  ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರ‌ ಹಾಗೂ ಅದರ ಸಮರ್ಪಕ‌ ವಿಶ್ಲೇಷಣೆ‌ ಪೂರ್ಣಗೊಳ್ಳುವವರೆಗೂ ವಿದ್ಯಾಗಮ‌ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ  ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.

ವಿದ್ಯಾಗಮ ಯೋಜನೆ ಆರಂಭವಾದ ನಂತರ ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಕೋವಿಡ್-19 ಪಾಸಿಟಿವ್  ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಸರ್ಕಾರದ ಮೇಲೆ ವಿವಿಧ ವಲಯಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.

No Comments

Leave A Comment