ಮೂಡುಬಿದಿರೆ: ಅಕ್ರಮ ದನಸಾಗಾಟ ಜಾಲದ ಮೇಲೆ ದಾಳಿ, ಗಾಳಿಯಲ್ಲಿ ಗುಂಡು ಹಾರಿಸಿದ ಪೊಲೀಸರು ಮೂಡುಬಿದಿರೆ: ರಿಟ್ಸ್ ಕಾರಿನಲ್ಲಿ ಅಕ್ರಮ ದನ ಸಾಗಾಟ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಹತ್ನಿಸಿದ ಘಟನೆ ಮೂಡುಬಿದಿರೆ ಸಮೀಪದ ಶಿರ್ತಾಡಿಯಲ್ಲಿ ರವಿವಾರ ಬೆಳಿಗ್ಗೆ ನಡೆದಿದೆ. ಆದರೆ ಆರೋಪಿಗಳು ಪರಾರಿಯಾಗಿದ್ದು, ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮೂಡುಬಿದಿರೆ ಸಮೀಪದ ಶಿರ್ತಾಡಿ ಕಡೆಯಿಂದ ಹೌದಾಲ್ ಕಡೆಗೆ ಬರುತ್ತಿದ್ದ ರಿಟ್ಸ್ ಕಾರ್ ನಲ್ಲಿ ಆರು ದನಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿರುವ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಪರಾರಿಯಾಗಲು ಯತ್ನಿಸಿದ ಆರೋಪಿಗಳು ಪೊಲೀಸ್ ಜೀಪ್ ಗೆ ಡಿಕ್ಕಿ ಹೊಡೆಯಲು ಯತ್ನಿಸಿದ್ದಾರೆ. ಕೂಡಲೇ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಕಾರು ರಸ್ತೆ ಪಕ್ಕದ ಚರಂಡಿಗೆ ಢಿಕ್ಕಿ ಹೊಡೆದಿದ್ದು, ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ವಾಹನ, ಜಾನುವಾರುಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ತನಿಖೆ ಆರಂಭಿಸಿದ್ದಾರೆ. Share this:TweetWhatsAppEmailPrintTelegram